ತುಮಕೂರು: ಗೋವಾದಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ರಸ್ತೆ ಪಕ್ಕದಲ್ಲಿರುವ ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಮೂವರು ಮಹಿಳೆಯರು ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದೆ.
ಬೆಳಗಿನ ಜಾವ 4.30ರ ವೇಳೆಗೆ ಈ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್ನಲ್ಲಿದ್ದ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಕೂಡಲೇ ಅವರನ್ನೆಲ್ಲ ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಸ್ನಲ್ಲಿ 29 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ವಿ ಅಶೋಕ್ ಹಾಗೂ ಕಳ್ಳಂಬೆಳ್ಳ ಪೊಲೀಸರು ಭೇಟಿ ನೀಡಿದ್ದರು.