ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆ, ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು ಇದೇ 22 ರಂದು ಉದಯಪುರದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ.
ಭಾನುವಾರ (ಡಿ.01) ರಂದು ಲಕ್ನೋದಲ್ಲಿ ನಡೆದ 2024ರ ಸೈಯದ್ ಮೋದಿ ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಮಹಿಳಾ ಸಿಂಗಲ್ಸ್‌ನಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದರು.
ಹೈದರಾಬಾದ್ ಮೂಲದ ಪೋಸಿಡೆಕ್ಸ್ ಟೆಕ್ನಾಲಜೀಸ್ ಎಂಬ ಖಾಸಗಿ ಕಂಪೆನಿಯ ಕಾರ್ಯನಿರ್ವಾಹಕ ನಿರ್ದೇಶಕರಾಗಿರುವ ವೆಂಕಟ ದತ್ತ ಸಾಯಿ ಎಂಬವರನ್ನು ವಿವಾಹವಾಗಲಿದ್ದಾರೆ.
ಈ ಕುರಿತು ಸಿಂಧು ತಂದೆ ಪಿವಿ ರಮಣ ಮಾಹಿತಿ ನೀಡಿದ್ದು, ಡಿ.20 ರಿಂದ ಮದುವೆ ಶಾಸ್ತ್ರಗಳು ಶುರುವಾಗಲಿದೆ. ಡಿ.22 ರಂದು ಉದಯಪುರದಲ್ಲಿ ಮದುವೆ ನಡೆಯಲಿದೆ. ಇನ್ನೂ ಡಿ.24 ರಂದು ಹೈದರಾಬಾದ್‌ನಲ್ಲಿ ಆರತಕ್ಷತೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಸಿಂಧು ಇಲ್ಲಿಯವರೆಗೆ ಒಂದು ಚಿನ್ನದ ಪದಕ ಸೇರಿದಂತೆ ಒಟ್ಟು ಐದು ವಿಶ್ವ ಚಾಂಪಿಯನ್‌ಶಿಪ್ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.