ಬೆಂಗಳೂರು: ಪೊಲೀಸ್ ಇಲಾಖೆಯು KSRP ಬೆಟಾಲಿಯನ್‌ನಲ್ಲಿ ಒಟ್ಟು 2400 ಹೊಸ ಸಿಬ್ಬಂದಿ ನೇಮಕಾತಿಗೆ ಮುಂದಾಗಿದೆ.
SSLC ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದ ರಾಜ್ಯದ ಉದ್ಯೋಗ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಪೊಲೀಸ್ ಇಲಾಖೆಯ ಸಶಸ್ತ್ರ ಮೀಸಲು ಪಡೆಯಲ್ಲಿ 2 ಹೊಸ ಬೆಟಾಲಿಯನ್ ಪ್ರಾರಂಭಕ್ಕೆ ರಾಜ್ಯ ಸರ್ಕಾರದ ಹಸಿರು ನಿಶಾನೆ ನೀಡಿದೆ.
ದೇವನಹಳ್ಳಿ ಬಳಿ 100 ಎಕರೆ, ಕೆಜಿಎಫ್ ಬಳಿ 50 ಎಕರೆ ಸ್ಥಳವನ್ನು ಸಹ ಗುರುತಿಸಿ ಮೀಸಲಿಡಲಾಗಿದೆ ಎಂದು ಎಡಿಜಿಪಿ ಉಮೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.