ಚೆನ್ನೈ: ಗಾಂಜಾ ಮತ್ತು ಮಾದಕ ದ್ರವ್ಯ ದಂಧೆಕೋರರೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ತಮಿಳು ನಟ ಮನ್ಸೂರ್ ಅಲಿ ಖಾನ್ ಪುತ್ರನನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ.
ಗಾಂಜಾ ವ್ಯಾಪಾರದಲ್ಲಿ ತೊಡಗಿರುವ ವ್ಯಕ್ತಿಗಳು ಈ ಹಿಂದಿನಿಂದಲೂ ಆತನೊಂದಿಗೆ ಸಂಪರ್ಕ ಹೊಂದಿರುವುದಾಗಿ ಗುಪ್ತಚರ ಇಲಾಖೆಯು ಮಾಹಿತಿ ನೀಡಿದೆ.
ಕಳೆದ ವರ್ಷವಷ್ಟೇ ಖಳ ನಟ ಮನ್ಸೂರ್ ಖಾನ್ ನಟಿ ತ್ರಿಷಾ ಕೃಷ್ಣನ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ಭಾರೀ ಟೀಕೆ ಮತ್ತು ವಿವಾದಕ್ಕೆ ಗುರಿಯಾಗಿದ್ದರು.!