ಹೈದರಾಬಾದ್ : ಪುಷ್ಪ-2 ಸಿನಿಮಾ ಬಿಡುಗಡೆ ಆಗಿದ್ದು, ಸಿನಿಮಾ ವೀಕ್ಷಣೆಗೆ ಹೋಗಿದ್ದ ಮಹಿಳೆಯೊಬ್ಬರು ಕಾಲ್ತುಳಿತದಿಂದ ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.
ತೆಲಂಗಾಣದ ಹೈದರಾಬಾದ್ ಸಂಧ್ಯಾ ಚಿತ್ರಮಂದಿರಕ್ಕೆ ಪುಷ್ಪ-2 ಸಿನಿಮಾಕ್ಕೆ ಹೋಗಿದ್ದ ಮಹಿಳೆಯೊಬ್ಬರು ಕಾಲ್ತುಳಿತದಿಂದ ಸಾವನ್ನಪ್ಪಿದ್ದಾರೆ. ಮೃತ ಮಹಿಳೆಯನ್ನು ರೇವತಿ ಎಂದು ಗುರುತಿಸಲಾಗಿದೆ. ತನ್ನ ಮಗನ ಜೊತೆಗೆ ಪುಷ್ಪ-2 ಸಿನಿಮಾಗೆ ಹೋಗಿದ್ದ ವೇಳೆ ಸಂಧ್ಯಾ ಚಿತ್ರಮಂದಿರದ ಬಳಿ ನೂಕುನುಗ್ಗಲು ಉಂಟಾಗಿದ್ದು, ಈ ವೇಳೆ ಪೊಲೀಸರು ಗುಂಪು ಚದುರಿಸಲು ಲಾಠಿ ಚಾರ್ಜ್ ಮಾಡಿದ್ದಾರೆ.
ಲಾಠಿಚಾರ್ಜ್ ವೇಳೆ ಕಾಲ್ತುಳಿದಲ್ಲಿ ತಾಯಿ ರೇವತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಗ ತೇಜ್ ಗಂಭೀರವಾಗಿ ಗಾಯಗೊಂಡಿದ್ದು, ಬೇಗಂಪೇಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ