ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ವೃಂದದಲ್ಲಿನ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲಾಗುತ್ತಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಒಟ್ಟು 28 ಜೂನಿಯರ್ ಅಸಿಸ್ಟೆಂಟ್, ಕಂಪ್ಯೂಟರ್ ಆಪರೇಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಈ ಸುವರ್ಣಾವಕಾಶವನ್ನು ಮಿಸ್ ಮಾಡಿಕೊಳ್ಳಬೇಡಿ. ಕರ್ನಾಟಕ ಸರ್ಕಾರದ ಉದ್ಯೋಗ ಮಾಡಬಯಸುವ ಅಭ್ಯರ್ಥಿಗಳಿಗೆ ಇದು ಒಳ್ಳೆಯ ಅವಕಾಶವಾಗಿದೆ. ಅರ್ಜಿ ಸಲ್ಲಿಸಲು ಜನವರಿ 5, 2025 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಪ್ಲೈ ಮಾಡಬೇಕು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಹುದ್ದೆಯ ಮಾಹಿತಿ:
ಸೀನಿಯರ್ ಪ್ರೋಗ್ರಾಮರ್- 2
ಜೂನಿಯರ್ ಪ್ರೋಗ್ರಾಮರ್ – 2
ಜೂನಿಯರ್ ಕೌನ್ಸಲ್ ಆಪರೇಟರ್- 4
ಕಂಪ್ಯೂಟರ್ ಆಪರೇಟರ್- 4
ಅಸಿಸ್ಟೆಂಟ್- 3
ಜೂನಿಯರ್ ಅಸಿಸ್ಟೆಂಟ್- 8
ಡೇಟಾ ಎಂಟ್ರಿ ಅಸಿಸ್ಟೆಂಟ್/ ಟೈಪಿಸ್ಟ್- 5
ವಿದ್ಯಾರ್ಹತೆ:
ಸೀನಿಯರ್ ಪ್ರೋಗ್ರಾಮರ್, ಜೂನಿಯರ್ ಪ್ರೋಗ್ರಾಮರ್, ಜೂನಿಯರ್ ಕೌನ್ಸಲ್ ಆಪರೇಟರ್ – ಕಂಪ್ಯೂಟರ್ ಸೈನ್ಸ್/ ಇನ್ಫರ್ಮೇಶನ್ ಸೈನ್ಸ್/ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್‌ನಲ್ಲಿ ಪದವಿ
ಕಂಪ್ಯೂಟರ್ ಆಪರೇಟರ್ – ಕಂಪ್ಯೂಟರ್ ಅಪ್ಲಿಕೇಶನ್‌ನಲ್ಲಿ ಪದವಿ, ಬಿಸಿಎ, ಕಂಪ್ಯೂಟರ್ ಸೈನ್ಸ್‌ನಲ್ಲಿ ಬಿ.ಎಸ್ಸಿ
ಅಸಿಸ್ಟೆಂಟ್- ಕಾನೂನಿನಲ್ಲಿ ಪದವಿ, ಎಲ್‌ಎಲ್‌ಬಿ
ಜೂನಿಯರ್ ಅಸಿಸ್ಟೆಂಟ್- ಪದವಿ
ಡೇಟಾ ಎಂಟ್ರಿ ಅಸಿಸ್ಟೆಂಟ್/ ಟೈಪಿಸ್ಟ್- 12ನೇ ತರಗತಿ
ವಯೋಮಿತಿ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 23, 2024ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
SC/ST/ಪ್ರವರ್ಗ-I ಅಭ್ಯರ್ಥಿಗಳು: 05 ವರ್ಷಗಳು
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: 03 ವರ್ಷಗಳು
ಅರ್ಜಿ ಶುಲ್ಕ:
ವಿಶೇಷ ಚೇತನ ಅಭ್ಯರ್ಥಿಗಳು: ರೂ.250/-
SC/ST/ಪ್ರವರ್ಗ-I/ಮಾಜಿ ಸೈನಿಕ ಅಭ್ಯರ್ಥಿಗಳು: ರೂ.500/-
ಸಾಮಾನ್ಯ/OBC/2A/2B/3A/3B ಅಭ್ಯರ್ಥಿಗಳು: ರೂ.750/-
ಪಾವತಿ ವಿಧಾನ: ಆನ್‌ಲೈನ್
ವೇತನ:
ಸೀನಿಯರ್ ಪ್ರೋಗ್ರಾಮರ್- ಮಾಸಿಕ ₹ 52,650- 97,100
ಜೂನಿಯರ್ ಪ್ರೋಗ್ರಾಮರ್ – ಮಾಸಿಕ ₹ 43,100- 83,900
ಜೂನಿಯರ್ ಕೌನ್ಸಲ್ ಆಪರೇಟರ್- ಮಾಸಿಕ ₹ 37,900- 70,850
ಕಂಪ್ಯೂಟರ್ ಆಪರೇಟರ್- ಮಾಸಿಕ ₹ 30,350- 58,250
ಅಸಿಸ್ಟೆಂಟ್- ಮಾಸಿಕ ₹ 30,350- 58,250
ಜೂನಿಯರ್ ಅಸಿಸ್ಟೆಂಟ್- ಮಾಸಿಕ ₹ 21,400- 42,000
ಡೇಟಾ ಎಂಟ್ರಿ ಅಸಿಸ್ಟೆಂಟ್/ ಟೈಪಿಸ್ಟ್- ಮಾಸಿಕ ₹ 21,400- 42,000
ಉದ್ಯೋಗದ ಸ್ಥಳ:
ಕರ್ನಾಟಕ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್‌ನಲ್ಲಿ ತಿಳಿಸಲಾಗಿದೆ. ಅಪ್ಲೈ ಮಾಡುವ ನೇರ ಲಿಂಕ್‌ನ್ನು ಈ ಕೆಳಗೆ ನೀಡಲಾಗಿದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 04/12/2024
ಅರ್ಜಿ ಸಲ್ಲಿಸಲು ಕೊನೆಯ ದಿನ: ಜನವರಿ 3, 2025
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: ಜನವರಿ 4, 2025