ದೆಹಲಿ: ರೈತರ ಪ್ರತಿಭಟನೆ ತೀವ್ರಗೊಳ್ಳುತ್ತಿರುವ ಹೊತ್ತಲ್ಲೇ, ನರೇಂದ್ರ ಮೋದಿ ಸರಕಾರವು ರೈತರಿಗೆ ಖುಷಿ ಸುದ್ದಿ ನೀಡಿದೆ. ಎಲ್ಲಾ ಕೃಷಿ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆಯಲ್ಲಿ (MSP) ಖರೀದಿಸಲಾಗುವುದು ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.
‘MSP’ಗೆ ಕಾನೂನು ಬೆಂಬಲ ಸೇರಿದಂತೆ ಹಲವು ಬೇಡಿಕೆಗಳ ಪಟ್ಟಿಯನ್ನು ಹೊತ್ತು ರೈತರು ದೆಹಲಿಗೆ ಕಾಲ್ನಡಿಗೆ ಜಾಥಾವನ್ನು ಆರಂಭಿಸಿದ ದಿನವೇ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.