ದೇಹದಲ್ಲಿ ಬಿಳಿ ರಕ್ತ ಕಣಗಳನ್ನು ಹೆಚ್ಚು ಉತ್ಪತ್ತಿ ಮಾಡಿ ಸೋಂಕುಗಳು ಹಾಗೂ ಕಾಯಿಲೆಗಳ ವಿರುದ್ಧ ರಕ್ಷಣೆ ನೀಡುತ್ತದೆ.
ತನ್ನಲ್ಲಿ ವಿಟಮಿನ್ ಸಿ ಪ್ರಮಾಣವನ್ನು ಅಧಿಕವಾಗಿ ಹೊಂದಿರುವ ಕಿತ್ತಳೆ ಹಣ್ಣು, ನಮ್ಮ ದೇಹದ ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.
ಕಿತ್ತಳೆ ಹಣ್ಣು ದೇಹದ ತೂಕ ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ. ಇದರಲ್ಲಿ ಹೆಚ್ಚಿನ ನೀರಿನ ಪ್ರಮಾಣ ಇದ್ದು, ಹೊಟ್ಟೆ ತುಂಬಿಕೊಂಡ ಅನುಭವ ಉಂಟಾಗುತ್ತದೆ (Stomach- full feeling).
ಸೂರ್ಯನ ಹಾನಿಕಾರಕ ಕಿರಣಗಳಿಂದ ನಮ್ಮ ಚರ್ಮವನ್ನು ರಕ್ಷಿಸುವುದು.
ಹೃದಯ ಹಾಗೂ ಹೃದಯ ರಕ್ತನಾಳದ ಕಾಯಿಲೆಗಳನ್ನು ಗುಣಪಡಿಸಿ ಪಾರ್ಶ್ವವಾಯು ಉಂಟಾಗದಂತೆ ನೋಡಿಕೊಳ್ಳುತ್ತದೆ.
ಕಿತ್ತಳೆ ಹಣ್ಣಿನಲ್ಲಿ ಪೊಟ್ಯಾಸಿಯಂ ಪ್ರಮಾಣ ಹೆಚ್ಚಾಗಿದ್ದು ಇದು ಹೃದಯದ ಆರೋಗ್ಯಕ್ಕೆ ಅನುಕೂಲ.
ಗಾಯ ಆದಂತಹ ಸಂದರ್ಭದಲ್ಲಿ ಬೇಗನೆ ವಾಸಿ ಮಾಡುತ್ತದೆ.
ಕಿತ್ತಳೆ ಹಣ್ಣಿನಲ್ಲಿ ಕರಗುವ ನಾರಿನ ಅಂಶವಿದ್ದು ಕೊಲೆಸ್ಟ್ರಾಲ್ ಪ್ರಮಾಣವನ್ನು ಕಡಿಮೆ ಮಾಡುತ್ತದೆ.
ಆರೋಗ್ಯಕರವಾದ ಜೀವಕೋಶಗಳ ಬೆಳವಣಿಗೆಗೆ ಸಹಾಯ ಮಾಡುತ್ತದೆ.
ಕಿತ್ತಳೆ ಹಣ್ಣಿನಲ್ಲಿ ದೇಹವನ್ನು ತಂಪಾಗಿಸುವ ಗುಣವಿದ್ದು, ಇದೇ ಗುಣದಿಂದ ಹೊಟ್ಟೆ ಉರಿ, ಎದೆ ಉರಿ, ಎಲ್ಲವೂ ಮಾಯವಾಗುತ್ತದೆ.
ಚರ್ಮದ ಸೌಂದರ್ಯವನ್ನು ಹಾಗೂ ಸಾಂದ್ರತೆಯನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
ಕಿತ್ತಳೆ ಹಣ್ಣಿನಲ್ಲಿ ನೈಸರ್ಗಿಕವಾದ ಸಕ್ಕರೆ ಅಂಶ ಇರುವುದರಿಂದ ಸಿಹಿ ಹಾಕುವ ಅವಶ್ಯಕತೆ ಇಲ್ಲ.