ಚಿತ್ರದುರ್ಗ : ಮುಂಬರುವ ಜಿ.ಪಂ. ತಾ.ಪಂ. ಹಾಗೂ 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸ ಅಧಿಕಾರವನ್ನು ಹಿಡಿಯಬೇಕಿದೆ ಇದಕ್ಕೆ ಕಾರ್ಯಕರ್ತರ ಸಹಾಯ, ಸಹಕಾರ ಅಗತ್ಯವಾಗಿದೆ ಎಂದು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ತಿಳಿಸಿದರು.
ಚಿತ್ರದುರ್ಗ ನಗರಕ್ಕೆ ಭೇಟಿ ನೀಡಿದ ಅವರು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಆಗಮಿಸಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಇತ್ತಿಚೆಗೆ ನಡೆದ ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲುವನ್ನು ಸಾಧಿಸಿದೆ ಶಿಗ್ಗಾವಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಇತರೆ ಸಚಿವರ ಸಹಾಯ, ಹಾಗೂ ಅಲ್ಲಿನ ಕಾರ್ಯಕರ್ತರ ಸಹಕಾರದಿಂದ ಗೆಲುವನ್ನು ಸಾಧಿಸಲಾಗಿದೆ. ಇಲ್ಲಿ ಸತತವಾಗಿ ಬಿಜೆಪಿ ಗೆಲುವನ್ನು ಸಾಧಿಸಲಾಗುತ್ತಿತು ಆದರೆ ಈ ಬಾರಿ ಅಲ್ಲಿನ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಮತವನ್ನು ನೀಡುವುದರ ಮೂಲಕ ಜಯವನ್ನು ತಂದು ಕೊಟ್ಟಿದ್ದಾರೆ ಎಂದರು.
ಸಚಿವರು ಯಾವುದೇ ಜಿಲ್ಲೆಗೆ ಭೇಟಿ ನೀಡಿದರು ಸಹಾ ಅಲ್ಲಿನ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡುವುದು ವಾಡಿಕೆಯಾಗಿದೆ ಇದೇ ಮಾದರಿಯಲ್ಲಿ ನಾನು ಸಹಾ ಇಂದು ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬೇಟಿ ನೀಡಿದ್ದೇನೆ ಬಂದಾಗ ಅದ್ದೂರಿಯಾದ ಸ್ವಾಗತವನ್ನು ನೀಡಿದ್ದೀರಾ ಇದಕ್ಕೆ ನಾನು ಅಬಾರಿಯಾಗಿದ್ದೇನೆ, ಇಲ್ಲಿ ಬಂದಾಗ ಪಕ್ಷದ ಅಧ್ಯಕ್ಷರ ಮುಖಂಡರ, ಕಾರ್ಯಕರ್ತರ ಸಮಸ್ಯೆಯನ್ನು ಆಲಿಸಬೇಕು ಅದಕ್ಕೆ ಪರಿಹಾರವನ್ನು ಕಂಡುಕೊಳ್ಳಬೇಕು ಎನ್ನುವುದು ನನ್ನ ಆಸೆಯಾಗಿದೆ. ನಿಮ್ಮ ಸಮಸ್ಯೆಗಳನ್ನು ಕೇಳಿ ನಮ್ಮ ಪಕ್ಷದ ವರಿಷ್ಠರ ಬಳಿ ಹೇಳಿ ಅದರ ಪರಿಹಾರಕ್ಕೆ ಕಂಡುಕೊಳ್ಳುವ ಪ್ರಯತ್ನವನ್ನು ಮಾಡಲಾಗುವುದು ಭರವಸೆಯನ್ನು ನೀಡಿದರು.
ನಮ್ಮ ಸರ್ಕಾರ ಬಡವರಿಗಾಗಿ ಉತ್ತಮವಾದ ಯೋಜನೆಗಳನ್ನು ಜಾರಿ ಮಾಡುವುದರ ಮೂಲಕ ಉತ್ತಮವಾದ ಸರ್ಕಾರ ಎನ್ನುವಂತ ಹೆಸರನ್ನು ಪಡೆಯಬೇಕಿದೆ. ಇದಕ್ಕೆ ನಿಮ್ಮೆಲ್ಲಾ ಸಹಕಾರ ಅಗತ್ಯವಾಗಿದೆ. ಈ ಹಿನ್ನಲೆಯಲ್ಲಿ ನಾವೆಲ್ಲಾ ಒಗ್ಗಟಾಗಿ ಇರಬೇಕು 2028ರಲ್ಲಿ ಮತ್ತೋಮ್ಮೆ ಕಾಂಗ್ರೆಸ್ ಪಕ್ಷದ ಅಧಿಕಾರಕ್ಕೆ ತರಬೇಕಿದೆ. ಗ್ಯಾರೆಂಟಿಯನ್ನು ಜನರಿಗಾಗಿ ನೀಡಲಾಗಿದೆ ರಾಜ್ಯದಲ್ಲಿ ಅಭೀವೃದ್ದಿಯನ್ನು ಮಾಡಲಾಗುತ್ತಿದೆ. ಸಮಾಜಿಕ ನ್ಯಾಯವನ್ನು ನೀಡಲಾಗುತ್ತಿದೆ, ಈ ಹಿನ್ನಲೆಯಲ್ಲಿ ಮುಂಬರುವ ಜಿಪಂ. ತಾ.ಪಂ ಹಾಗೂ 2028ರ ವಿಧಾನಸಭಾ ಚುನಾವಣೆಯಲ್ಲಿ ಎಲ್ಲರ ಆರ್ಶಿವಾದದಿಂದ ಗೆಲುವನ್ನು ಸಾಧಿಸಬೇಕಿದೆ ಎಂದರು.
ಶಾಸಕರಾದ ರಘುಮೂರ್ತಿ ಮಾತನಾಡಿ, ಶಾಸಕರಾದ ಕೆ.ಸಿ.ವಿರೇಂದ್ರ ಪಪ್ಪಿ ,ಡಿಸಿಸಿ ಅಧ್ಯಕ್ಷ ತಾಜ್ಪೀರ್, ಕಾರ್ಯಾಧ್ಯಕ್ಷರಾದ ಹಾಲಸ್ವಾಮಿ, ಮಹಿಳಾ ಘಟಕದ ಅಧ್ಯಕ್ಷರಾದ ಗೀತಾನಂದಿನಿಗೌಡ, ಜಿ.ಪಂ.ಮಾಜಿ ಅಧ್ಯಕ್ಷರಾದ ಶಶಿಕಲಾ ಸುರೇಶ್ ಬಾಬು, ಮಾಜಿ ಸದಸ್ಯರಾದ ನರಸಿಂಹರಾಜು, ಸರ್ದಾರ್, ಪ್ರಸನ್ನಕುಮಾರ್, ಎನ್,ಡಿ.ಕುಮಾರ್, ಅಂಜನಪ್ಪ, ಕುಮಾರ್ ಗೌಡ, ಸಂಪತ್ ಕುಮಾರ್, ಗ್ಯಾರೆಂಟಿ ಅಧ್ಯಕ್ಷರಾದ ಶಿವಣ್ಣ, ಲಕ್ಷ್ಮೀಕಾಂತ ಸೇರಿದಂತೆ ಇತರರು ಭಾಗವಹಿಸಿದ್ದರು.