ಗಾಂಧಿ ಕುಟುಂಬದ ಪ್ರಮುಖ ನಾಯಕಿ ಸೋನಿಯಾ ಗಾಂಧಿ ಪ್ರತಿಪಕ್ಷದ ಆರೋಪಕ್ಕೆ ಗುರಿಯಾಗಿದ್ದಾರೆ.ಹೌದು, ಕಾಂಗ್ರೆಸ್ ರಾಜ್ಯಸಭಾ ಸಂಸದೆ ಸೋನಿಯಾ ಗಾಂಧಿ ಅವರನ್ನು ಬಿಜೆಪಿ ಮತ್ತೊಮ್ಮೆ ಟಾರ್ಗೆಟ್ ಮಾಡಿದೆ.
FDL-AP ಫೌಂಡೇಶನ್ ಸಹ-ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ ಅವರು ಅಮೆರಿಕದ ಉದ್ಯಮಿ ಜಾರ್ಜ್ ಸೊರೊಸ್ ಫೌಂಡೇಶನ್‌ನಿಂದ ಧನಸಹಾಯ ಪಡೆದ ಸಂಸ್ಥೆಯೊಂದಿಗೆ ಸಂಬಂಧ ಹೊಂದಿದ್ದಾರೆ.
ಈ ಸಂಬಂಧವು ಭಾರತದ ಅಭಿವೃದ್ಧಿಗೆ ಅಡ್ಡಿಪಡಿಸುವ ಜಾರ್ಜ್ ಸೊರೊಸ್ ಮತ್ತು ಕಾಂಗ್ರೆಸ್ ಪಕ್ಷದ ಗುರಿಯನ್ನು ಪ್ರತಿಬಿಂಬಿಸುತ್ತದೆ ಎಂದು ಭಾರತೀಯ ಜನತಾ ಪಕ್ಷ ಆರೋಪಿಸಿದೆ.