ಬೆಂಗಳೂರು : ಇದೀಗ ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ಬೀಸಲಿದ್ದು, ರಾಜ್ಯದ 10 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬಂಗಾಳ ಕೊಲ್ಲಿಯಲ್ಲಿ ಮತ್ತೆ ಚಂಡಮಾರುತ ಉದ್ಭವಿಸಿದ್ದು ರಾಜ್ಯದಲ್ಲಿ ಇಂದಿನಿಂದ ಮತ್ತೆ ಮಳೆಯಾಗುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನ 10 ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಸ್ಥಳಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಕೆಲವು ಕಡೆಗಳಲ್ಲಿ ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 26 ಮತ್ತು 18 ಡಿಗ್ರಿ ಇರಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.