ಪುಷ್ಪ 2 ಸಿನಿಮಾದ ಭರ್ಜರಿ ಯಶಸ್ಸಿನಲ್ಲಿ ತೇಲುತ್ತಿದ್ದ ನಟ ಅಲ್ಲು ಅರ್ಜುನ್ಗೆ ಪೊಲೀಸರು ಶಾಕ್ ನೀಡಿದ್ದಾರೆ. ಪುಷ್ಪ 2 ಸಿನಿಮಾ ಪ್ರದರ್ಶನದ ವೇಳೆ ಚಿತ್ರಮಂದಿರದಲ್ಲಿ ಉಂಟಾದ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಅಲ್ಲು ಅರ್ಜುನ್ರನ್ನು ಹೈದರಾಬಾದ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲು ಅರ್ಜುನ್ ಬಂಧನ ಸುದ್ದಿ ಟಾಲಿವುಡ್ನಲ್ಲಿ ಸಂಚಲನ ಸೃಷ್ಟಿಸಿದ್ದು, ಅಭಿಮಾನಿಗಳು ಅಲ್ಲು ಅರ್ಜುನ್ರನ್ನು ಏನೂ ತಪ್ಪಿಲ್ಲ ಎಂದು ವಾದಿಸುತ್ತಿದ್ದಾರೆ.
ಹೈದರಾಬಾದ್ನ ಸಂಧ್ಯಾ ಚಿತ್ರಮಂದಿರದಲ್ಲಿ ಪುಷ್ಪ 2 ಸಿನಿಮಾ ಪ್ರೀಮಿಯರ್ ಪ್ರದರ್ಶನದ ವೇಳೆ ಅಲ್ಲು ಅರ್ಜುನ್ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಗಲಭೆ ಉಂಟಾಗಿದ್ದು ಕಾಲ್ತುಳಿತ ಸಂಭವಿಸಿತ್ತು. ಘಟನೆಯಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದರೆ, ಆಕೆಯ ಮಗ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿತ್ತು.