ಚಿತ್ರದುರ್ಗ: ಚಿತ್ರದುರ್ಗ ಹೊರವಲಯದ ಉಪಾಧ್ಯ ಹೋಟೆಲ್ ಪಕ್ಕದಲ್ಲಿರುವ ಕಣಿವೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಕಣಿವೆ ಆಂಜನೇಯ ಸ್ವಾಮಿ ಮತ್ತು ಶ್ರೀ ಸುಬ್ರಹ್ಮಣ್ಯ ಸ್ವಾಮಿಯ 27ನೇ ವರ್ಷದ ಕಾರ್ತಿಕ ಮಾಸದ ಪೂಜಾ ಮಹೋತ್ಸವ ಹಮ್ಮಿಕೊಳ್ಳಲಾಗಿದೆ.
ದಿನಾಂಕ 14-12-2024 ರಂದು ಶನಿವಾರ 27ನೇ ವರ್ಷದ ಕಾರ್ತಿಕ ಮಹೋತ್ಸವದ ಕಾರ್ಯಕ್ರಮಗಳು ನಡೆಯಲಿದ್ದು ಕಾರ್ಯಕ್ರಮಗಳಲ್ಲಿ ಶ್ರೀ ಕಣಿವೆ ಆಂಜನೇಯಸ್ವಾಮಿಗೆ ಬೆಳಿಗ್ಗೆ 9-00 ಗಂಟೆಗೆ ವಿಶೇಷ ಅಲಂಕಾರ, ಪೂಜೆ, ಮಹಾಮಂಗಳಾರತಿ ಮತ್ತು ಸೀತಾ ರಾಮರ ಪಲ್ಲಕ್ಕಿ ಉತ್ಸವ ಸಮಯ : ಬೆಳಿಗ್ಗೆ 11-00 ಗಂಟೆಯಿಂದ ಸಂಜೆ: 6-30ಕ್ಕೆ ಲಕ್ಷ ದೀಪೋತ್ಸವ ನಡೆಯಲಿದೆ. ಬೆಳಗ್ಗೆ 9 ಗಂಟೆಯಿಂದ “ ಅನ್ನಸಂತರ್ಪಣೆ ಬೆಳಿಗ್ಗೆ 9-00 ಗಂಟೆಯಿಂದ ರಾತ್ರಿ 9-00ರ ವರೆಗೆ ” ಜರುಗಲಿದ್ದು ಸರ್ವಭಕ್ತಾಧಿಗಳು ಈ ಕಾರ್ಯಕ್ರಮಕ್ಕೆ ಆಗಮಿಸಿ, ತನು, ಮನ, ಧನ, ದಾನ್ಯಗಳನ್ನು ಅರ್ಪಿಸಿ ಯಶಸ್ವಿಗೊಳಿಸಬೇಕು ಎಂದು ಅಂಜನೇಯ ಸ್ವಾಮಿಯ ಭಕ್ತಾದಿಗಳು ಮನವಿ ಮಾಡಿದ್ದಾರೆ.