ಭೋಪಾಲ್: ಭಾರತ್ ಜೋಡೋ ಯಾತ್ರೆಯಲ್ಲಿ ಸಿಹೋರ್ ನಿವಾಸಿಯಾಗಿದ್ದ ಉದ್ಯಮಿ ಮನೋಜ್ ಪಾರ್ಮರ್ ಅವರ ಮಕ್ಕಳು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ತಮ್ಮ ಹಣದ ಹುಂಡಿಯನ್ನು ನೀಡಿದ್ದರು.
ಇದೀಗ ಇದೇ ಮನೋಜ್ ಪಾರ್ಮರ್ ಮತ್ತ ಅವರ ಪತ್ನಿ ಶವ ಅನುಮಾನಸ್ಪಾದ ರೀತಿಯಲ್ಲಿ ಪತ್ತೆಯಾಗಿದೆ. ಡಿಸೆಂಬರ್ 5ರಂದು ಮನೋಜ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನಡೆಸಿ ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸಿದ್ದರು. ಡಿಸೆಂಬರ್ 13ರಂದು ಪತ್ನಿ ಜೊತೆ ಮನೋಜ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಸ್ಥಳದಲ್ಲಿ ಪೊಲೀಸರಿಗೆ ಡೆತ್ ನೋಟ್ ಲಭ್ಯವಾಗಿದೆ.
ಮನೋಜ್ ಪಾರ್ಮರ್ ಮತ್ತು ಪತ್ನಿ ಆತ್ಮಹತ್ಯೆ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಇದೊಂದು ಸರ್ಕಾರಿ ಪ್ರಾಯೋಜಿತ ಕೊಲೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ವಿಷಯ ತಿಳಯುತ್ತಿದ್ದಂತೆ ಬೆಳಗ್ಗೆ ಸುಮಾರು 8.30ಕ್ಕೆ ನಮ್ಮ ಸಿಬ್ಬಂದಿ ಇಲ್ಲಿಗೆ ಬಂದಿದ್ದಾರೆ. ಕುಟುಂಬಸ್ಥರಿಂದಲೂ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಎಲ್ಲಾ ಆಯಾಮದಲ್ಲಿಯೂ ತನಿಖೆ ನಡೆಸಲಾಗುತ್ತಿದೆ ಎಂದು ಎಸ್‌ಡಿಪಿ ಆಕಾಶ್ ಅಮಲ್ಕರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.