ಆಂಧ್ರಪ್ರದೇಶ: ಸನ್ಯಾಸಿನಿಯಾಗಲು ತರಬೇತಿ ಪಡೆಯುತ್ತಿದ್ದ ಅಪ್ರಾಪ್ತ ಕ್ರಿಶ್ಚಿಯನ್ ಹುಡುಗಿ ಮಗುವೊಂದಕ್ಕೆ ಜನ್ಮ ನೀಡಿ ನಂತರ ಮಗುವನ್ನು ಕೊಂ*ದ ಘಟನೆ ಆಂಧ್ರಪ್ರದೇಶದ ಅಮರಾವತಿ ಏಲೂರಿನ ಸೇಂಟ್ ಜೋಸೆಫ್ ಕಾನ್ವೆಂಟ್ ಹಾಸ್ಟೆಲ್‌ನಲ್ಲಿ ನಡೆದಿದೆ.
ಚರ್ಚ್-ಆಡಳಿತ ಸಂಸ್ಥೆ ಏಲೂರಿನ ‘ಡಯೋಸಿಸನ್’ ಚರ್ಚ್ ನಡೆಸುತ್ತಿದ್ದ, ಯುವತಿಯೊಂದಿಗೆ ಸಂಬಂಧ ಹೊಂದಿದ್ದ ಪ್ರಶಿಕ್ಷಣಾರ್ಥಿ ಪ್ರೀಸ್ಟ್ ನನ್ನು ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಸನ್ಯಾಸಿನಿ ತರಬೇತಿ ಪಡೆಯುತ್ತಿರುವ ಕ್ರಿಶ್ಚಿಯನ್ ಹುಡುಗಿ ಆಂಧ್ರಪ್ರದೇಶದ ನಂದ್ಯಾಲ್ ಜಿಲ್ಲೆಯ ಸೇಂಟ್ ಜೋಸೆಫ್ ಕಾನ್ವೆಂಟ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.
8 ಡಿಸೆಂಬರ್ 2024 ರಂದು, ಹಾಸ್ಟೆಲ್‌ನಲ್ಲಿ ಮಗುವಿಗೆ ಜನ್ಮ ನೀಡಿದ್ದು, ತಕ್ಷಣವೇ ಮಗುವನ್ನು ಕಿಟಕಿಯಿಂದ ಹೊರಗೆ ಎ*ಸೆದು ಕೊಂದಿ*ದ್ದಾಳೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ಪೊಲೀಸ್ ಇನ್ಸ್ ಪೆಕ್ಟರ್ ರಮಣ ನೇತೃತ್ವದಲ್ಲಿ ತನಿಖೆ ಆರಂಭಿಸಿದ್ದರು. ಈ ಘಟನೆಯು ಕಾನ್ವೆಂಟ್ ಹಾಸ್ಟೆಲ್ ಆಡಳಿತದ ನಿರ್ಲಕ್ಷ್ಯವನ್ನು ಬಯಲು ಮಾಡಿದೆ.