ಇಂಡಿಯನ್ ಏರ್ಫೋರ್ಸ್ ನೇಮಕಾತಿಗೆ ಸಂಬಂಧಿಸಿದಂತೆ, ಅಧಿಸೂಚನೆ ಬಿಡುಗಡೆಯಾಗಿದೆ. ಒಟ್ಟು 336 ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಯ ಹೆಸರು : ಫ್ಲೈಯಿಂಗ್ ಬ್ರ್ಯಾಂಚ್, ಗ್ರೌಂಡ್ ಡ್ಯೂಟಿ ಬ್ರ್ಯಾಂಚ್
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದವರಿಗೆ ಸ್ಪರ್ಧಾತ್ಮಕ ಪರೀಕ್ಷೆ ಮತ್ತು AFSB ಪರೀಕ್ಷೆಯ ನಡೆಸುವ ಮೂಲಕ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಆನ್ಲೈನ್ ಅಪ್ಲಿಕೇಶನ್ ಸಲ್ಲಿಸಲು ಆರಂಭಿಕ ದಿನಾಂಕ : 02-12-2024
ಆನ್ಲೈನ್ ಅಪ್ಲಿಕೇಶನ್ ಸಲ್ಲಿಸಲು ಕೊನೆ ದಿನಾಂಕ : 31-12-2024
ಅರ್ಜಿ ಸಲ್ಲಿಸಲು ಕನಿಷ್ಠ 20 ವರ್ಷ ಆಗಿರಬೇಕು. ಗರಿಷ್ಠ 26 ವರ್ಷ ವಯಸ್ಸು ಮೀರಿರಬಾರದು.
ಅರ್ಜಿ ಶುಲ್ಕ : 550 ರೂಪಾಯಿ, ಎನ್ ಸಿ ಸಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸಲು : https://afcat.cdac.in ವೆಬ್ ಸೈಟ್ ಸಂಪರ್ಕಿಸಿ.