ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಜೋಗ ಜಲಪಾತದ ಮುಖ್ಯದ್ವಾರ ಕಾಮಗಾರಿ ಹಾಗೂ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಜನವರಿ 01 ರಿಂದ ಮಾರ್ಚ್ 15ರ ವರೆಗೆ 3 ತಿಂಗಳುಗಳ ಕಾಲ ಪ್ರವಾಸಿಗರ ಪ್ರವೇಶವನ್ನು ನಿರ್ಭಂದಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ತೊಂದರೆಯಾಗಬಾರದೆ0ಬ ಕಾರಣದಿಂದ ಪ್ರವೇಶ ನಿರ್ಭಂದಿಸಲಾಗಿದ್ದು, ಸಾರ್ವಜನಿಕರು ಮತ್ತು ಪ್ರವಾಸಿಗರು ಸಹಕರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.