ಚಿತ್ರದುರ್ಗ : ಹೆಚ್.ಡಿ ಕುಮಾರಸ್ವಾಮಿಯವರು ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾಗುವುದರ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದಿಸುವ ವಾತಾವರಣ ನಿರ್ಮಾಣವಾಗಬೇಕಿದೆ ಎಂದು ಚಿತ್ರದುರ್ಗ ಜಿಲ್ಲಾ ಜೆಡಿಎಸ್ ಘಟಕದ ಅಧ್ಯಕ್ಷರಾದ ಎಂ.ಜಯ್ಯಣ್ಣ ರವರು ತಿಳಿಸಿದರು.
ಚಿತ್ರದುರ್ಗ ಜಿಲ್ಲಾ ಜಾತ್ಯಾತೀತ ಜನತಾದಳದ ಚಿತ್ರದುರ್ಗ ಜಿಲ್ಲಾ ಘಟಕದಿಂದ ಜಿಲ್ಲಾ ಕಚೇರಿ ಆವರಣದ ಜೆ.ಪಿ.ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ರಾಜ್ಯದ ಮಾಜಿ ಮುಖ್ಯಮಂತ್ರಿ, ಜೆಡಿಎಸ್ನ ರಾಜ್ಯಾಧ್ಯಕ್ಷರು, ಕೇಂದ್ರ ಸರ್ಕಾರದ ಉಕ್ಕು ಮತ್ತು ಕೈಗಾರಿಕಾ ಮಂತ್ರಿಗಳಾದ ಹೆಚ್.ಡಿ,ಕುಮಾರಸ್ವಾಮಿಯವರ 65 ನೇ ವರ್ಷದ ಜನ್ಮ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಕೇಕ್ ಕತ್ತರಿಸಿ ಮಾತನಾಡಿದರು.
ಕುಮಾರಸ್ವಾಮಿಯವರು ರಾಜ್ಯದ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಮಾಡಿದ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಈಗಲೂ ಸಹಾ ಜನರು ನೆನಪಿಸಿಕೊಳ್ಳುತ್ತಾರೆ. ರೈತರ ಸಾಲ ಮನ್ನಾ, ಭಾಗ್ಯಲಕ್ಷ್ಮೀ, ಮಕ್ಕಳಿಗೆ ಸೈಕಲ್ ವಿತರಣೆ ಸೇರಿದಂತೆ ವಿವಿಧ ರೀತಿಯ ಯೋಜನೆಗಳು ಈಗಲೂ ಸಹಾ ಜನರ ಮನಸ್ಸಿನಲ್ಲಿ ಇದೆ ಎಂದರು.
ಈಗ ಕುಮಾರಸ್ವಾಮಿಯವರು ಕೇಂದ್ರ ಸರ್ಕಾರದ ಮಂತ್ರಿಯಾಗಿ ದೇಶದ ಕಾರ್ಮಿಕರ ಸಮಸ್ಯೆಗಳನ್ನು ಪರಿಹಾರ ಮಾಡುವಲ್ಲಿ ಮುಂದಾಗಲಿ ಇದೇ ರೀತಿ ರಾಜ್ಯದ ಹಲವಾರು ಸಮಸ್ಯೆಗಳನ್ನು ಸಹಾ ಬಗೆಹರಿಸುವಲ್ಲಿ ಕುಮಾರಸ್ವಾಮಿಯವರು ಮುಂದಾಗಬೇಕಿದೆ. ರಾಜ್ಯದಲ್ಲಿ ಕೈಗಾರಿಕೆಗಳನ್ನು ಸ್ಥಾಪನೆ ಮಾಡುವುದರ ಮೂಲಕ ನಿರುದ್ಯೋಗ ಸಮಸ್ಯೆಯನ್ನು ನಿವಾರಣೆಯಲ್ಲಿ ಮುಂದಾಗಲಿ ಎಂದ ಅವರು ಆ ಭಾಗದ ಮತದಾರರು ಅವರನ್ನು ಸಂಸದರಾಗಿ ಮಾಡುವುದರ ಮೂಲಕ ಮಂತ್ರಿಗಳಾಗಿ ದೇಶದ ತುಂಬೆಲ್ಲಾ ಅವರು ಸೇವೆಯನ್ನು ಮಾಡುವಂತೆ ಮಾಡಲಾಗುತ್ತಿದೆ. ಮುಂದಿನ ದಿನದಲ್ಲಿ ಅವರಿಗೆ ಆರೋಗ್ಯ ಆಶ್ವರ್ಯ, ಆಧಿಕಾರವನ್ನು ಭಗವಂತ ನೀಡಲಿ ಎಂದರು.
ನಗರಸಭೆಯ ಮಾಜಿ ಅಧ್ಯಕ್ಷರು, ಜೆಡಿಎಸ್ನ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಬಿ.ಕಾಂತರಾಜ್ ಕಾರ್ಯಕ್ರಮದಲ್ಲಿ ಜೆಡಿಎಸ್ನ ಕಾರ್ಯಾಧ್ಯಕ್ಷರಾದ ಜಿ.ಬಿ.ಶೇಖರ್, ಮಹಾ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಸ್ವಾಮಿ ನಾಯಕ್, ಚಿತ್ರದುರ್ಗ ತಾಲ್ಲೂಕು ಅಧ್ಯಕ್ಷರಾದ ಸಣ್ಣ ತಿಮ್ಮಣ್ಣ, ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ಲಲಿತಾ ಕೃಷ್ಣಮೂರ್ತಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಗೀತಮ್ಮ, ಚಿತ್ರದುಗರ್À ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷರಾದ ನಸ್ರಲ್ಲಾ, ಸದಸ್ಯರಾದ ಚಂದ್ರಶೇಖರ್, ಹೊಳಲ್ಕೆರೆ ಜೆಡಿಎಸ್ ಅಧ್ಯಕ್ಷರಾದ ಪರಮಶ್ವರಪ್ಪ, ರುದ್ರಣ್ಣ ಜಾಲಿಕಟ್ಟೆ, ಮಂಜುನಾರ್ಥ, ಯುವ ಘಟಕದ ಅಧ್ಯಕ್ಷ ಪ್ರತಾಪ್ ಜೋಗಿ ಯುವ ಘಟಕದ ಅಧ್ಯಕ್ಷ ಅಬು, ಹನುಮಂತಪ್ಪ ಚಿದಾನಂದ ಪುಟ್ಟ ಸೇರಿದಂತೆ ಇತರರು ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ಚಿತ್ರದುರ್ಗ ನಗರಸಭೆಗೆ ನೂತನವಾಗಿ ಸ್ಥಾಯಿ ಸಮಿತಿಗೆ ಅದ್ಯಕ್ಷರಾಗಿ ಆಯ್ಕೆಯಾದ ನಸ್ರುಲ್ಲಾ ರವರನ್ನು ಜೆಡಿಎಸ್ ವತಿಯಿಂದ ಸನ್ಮಾನಿಸಲಾಯಿತು.