ಬೆಂಗಳೂರು: ಸಾಲುಮರದ ತಿಮ್ಮಕ್ಕ ಅವರ ಆರೋಗ್ಯದಲ್ಲಿ ಏರುಪೇರು ಆದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ವೈದ್ಯರು ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ.
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವಂತ ತಿಮ್ಮಕ್ಕ ಅವರಿಗೆ ವೈದ್ಯರು ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಸಿದ್ದಾರೆ. ಸಾಲುಮರದ ತಿಮ್ಮಕ್ಕ ಅವರಿಗೆ 113 ವರ್ಷಗಳು. ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಬಹು ಬೇಗ ಗುಣಮುಖರಾಗಿ ಬರಲಿ ಅಂತ ಅವರ ಹಿತೈಷಿಗಳು, ಅಭಿಮಾನಿಗಳು, ಕುಟುಂಬಸ್ಥರು ಕೋರಿದ್ದಾರೆ.