ನವದೆಹಲಿ : ಈಗಾಗಲೇ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆಯನ್ನು ಕೇಂದ್ರ ಸಚಿವ ಸಂಪುಟ ಅನುಮೋದಿಸಿದೆ. ಕೇಂದ್ರ ಕಾನೂನು ಸಚಿವ ಅರ್ಜುನ್ ಮೇಘವಾಲ್ ಅವರು ಇಂದು ಲೋಕಸಭೆ ಅಧಿವೇಶನದಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆಯನ್ನು ಮಂಡಿಸಿದರು.
ಮಸೂದೆಗೆ ಕಾಂಗ್ರೆಸ್, ಟಿಎಂಸಿ, ಎಸ್ಪಿ ಸೇರಿದಂತೆ ಹಲವು ಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಈ ಮಸೂದೆ ತರುವ ಅಗತ್ಯ ಏನಿದೆ ಎಂದು ಎಸ್ಪಿ ಸಂಸದ ಧರ್ಮೇಂದ್ರ ಯಾದವ್ ಪ್ರಶ್ನಿಸಿದ್ದಾರೆ. ಸಂಸದ ಮನೀಶ್ ತಿವಾರಿ, ಕೇಂದ್ರ ಮತ್ತು ರಾಜ್ಯದ ಅವಧಿಯನ್ನು ಹೇಗೆ ಏಕ ಕಾಲದಲ್ಲಿ ಮಾಡಲು ಸಾಧ್ಯ? ಭಾರತ ಒಕ್ಕೂಟ ದೇಶ, ಕೇಂದ್ರೀಕರಣ ಮಾಡುವುದು ಸರಿಯಲ್ಲ. ಇದು ಸಂವಿಧಾನ ವಿರೋಧಿ ತಿದ್ದುಪಡಿ ಎಂದು ಕಿಡಿಕಾರಿದ್ದಾರೆ.
ಈ ಮಸೂದೆ ಅಗತ್ಯ. ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯನ್ನು ಏಕಕಾಲಕ್ಕೆ ನಡೆಸಬೇಕು ಎಂದು ನಾವು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇವೆ ಎಂದು ಹೇಳಿದರು. ಪಂಚಾಯಿತಿ ಚುನಾವಣೆಯನ್ನು ಪ್ರತ್ಯೇಕವಾಗಿ ನಡೆಸಬೇಕು ಜೆಡಿಯು ನಾಯಕ ಸಂಜಯ್ ಕುಮಾರ್ ಝಾ ತಿಳಿಸಿದ್ದಾರೆ.