ಬೆಳಗಾವಿ : ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಕಳಪೆ ಗುಣಮಟ್ಟದ ಔಷಧಗಳನ್ನು ಪೂರೈಸಲಾಗುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಿಧಾನಸಭೆಯಲ್ಲಿಂದು ಆರೋಪ ಮಾಡಿದ್ದಾರೆ.
ನಿಲುವಳಿ ಸೂಚನೆ ಪೂರ್ವಭಾವಿ ಪ್ರಸ್ತಾಪ ಮಾಡಿದ ಅವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾದ ಶೌಚಾಲಯಗಳಿಲ್ಲ, ಅಗತ್ಯ ವೈದ್ಯರಿಲ್ಲ. ಅವಧಿ ಮುಗಿದ ಔಷಧ ಸೇವಿಸುವ ಪರಿಸ್ಥಿತಿ ಇದೆ. ನೂರಾರು ಜನರು ಮೃತಪಡುತ್ತಿದ್ದಾರೆ. ಬಳ್ಳಾರಿ, ಬೆಳಗಾವಿಯಲ್ಲಿ ಬಾಣಂತಿಯರು ಸಾಯುತ್ತಿದ್ದಾರೆ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಈ ವಿಚಾರದ ಚರ್ಚೆಗೆ ಅವಕಾಶ ನೀಡುವಂತೆ ಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ಮನವಿ ಮಾಡಿದರು.
ಇದಕ್ಕೆ ದನಿಗೂಡಿಸಿದ ಬಿಜೆಪಿ ಶಾಸಕ ಸಿ.ಎನ್.ಅಶ್ವತ್ಥನಾರಾಯಣ, ಆರೋಗ್ಯ ಸೇವೆಯನ್ನು ಸರ್ಕಾರ ಕಡೆಗಣಿಸಿದೆ. ಜನರಿಗೆ ಆರೋಗ್ಯ ಗ್ಯಾರಂಟಿಯೂ ಬೇಕು ಎಂದು ಆಗ್ರಹಿಸಿದರು.