ನವದೆಹಲಿ : ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ವಿರೋಧ ಪಕ್ಷದ ನಾಯಕರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಂಬೇಡ್ಕರ್ ವಿರುದ್ಧ ನೀಡಿರುವ ಅವಹೇಳನಕಾರಿ ಹೇಳಿಕೆಗಳನ್ನು ತೀವ್ರವಾಗಿ ಖಂಡಿಸಿದ್ದಾರೆ. ಅಲ್ಲದೇ ಸಂಸತ್ತಿನಲ್ಲಿ ಅಂಬೇಡ್ಕರ್ ನೀಡಿರುವ ಹೇಳಿಕೆ ಸರಿಯಲ್ಲ. ಅಮಿತ್ ಶಾ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕೂಡಲೇ ಸಂಪುಟದಿಂದ ವಜಾಗೊಳಿಸಬೇಕು ಎಂದರು. ಸಂಸತ್ತಿನಲ್ಲಿ ದಲಿತ ನಾಯಕ ಬಿಆರ್ ಅಂಬೇಡ್ಕರ್ ಅವರನ್ನು ಸಚಿವ ಅಮಿತ್ ಶಾ ಅವಮಾನಿಸಿದ್ದಾರೆ ಎಂದು ಆರೋಪಿಸಿ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಖರ್ಗೆ ಒತ್ತಾಯಿಸಿದರು.ಇದು ತಪ್ಪು ಎಂದು ಅಮಿತ್ ಶಾಗೆ ಹೇಳುವ ಬದಲು ಪ್ರಧಾನಿ ಮೋದಿ ಅವರು ಅಂಬೇಡ್ಕರ್ ಅವರ ಹೇಳಿಕೆಯ ಬಗ್ಗೆ ಸಮರ್ಥಿಸಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದರು.
ನಮ್ಮ ಬೇಡಿಕೆ ಏನೆಂದರೆ ಅಮಿತ್ ಶಾ ಕ್ಷಮೆ ಯಾಚಿಸಬೇಕು ಮತ್ತು ಪ್ರಧಾನಿ ಮೋದಿಗೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮೇಲೆ ನಂಬಿಕೆ ಇದ್ದರೆ ಮಧ್ಯರಾತ್ರಿಯೊಳಗೆ ಅಮಿತ್ ಶಾ ಅವರನ್ನು ವಜಾ ಮಾಡಬೇಕು ಎಂದು ಆಗ್ರಹಿಸಿದರು.