ನವದೆಹಲಿ: ಅಂಬೇಡ್ಕರ್ ಕುರಿತು ಅಮಿತ್ ಶಾ ರಾಜ್ಯಸಭೆಯ ಭಾಷಣದಲ್ಲಿ ಮಾತನಾಡಿದ್ದು ವಿವಾದಕ್ಕೆ ಕಾರಣವಾಗಿದೆ. ಅಮಿತ್ ಶಾ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ. ಹೀಗಾಗಿ ಅವರು ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅಮಿತ್ ಶಾ, ನಾನು ರಾಜೀನಾಮೆ ನೀಡಬೇಕೆಂದು ಮಲ್ಲಿಕಾರ್ಜುನ್ ಖರ್ಗೆ ಬಯಸಿದ್ದರೆ ಅದಕ್ಕೆ ನಾನು ಸಿದ್ಧ ಎಂದಿದ್ದಾರೆ. ಅಮಿತ್ ಶಾ ನೀಡಿದ ಈ ಹೇಳಿಕೆ ಬೆನ್ನಲ್ಲೇ ಅವರು ನಿಜವಾಗಿಯೂ ರಾಜೀನಾಮೆ ಕೊಡ್ತಾರಾ ಎಂಬ ಚರ್ಚೆಗಳು ಶುರುವಾಗಿವೆ.
ಇದೇ ವೇಳೆ ಮಾತನಾಡಿದ ಅಮಿತ್ ಶಾ, ಕಾಂಗ್ರೆಸ್ ಹಿಂದಿನಿಂದಲೂ ಹೇಳಿಕೆಗಳನ್ನು ತಿರುವುಚುವುದ, ಅಂಕಿ ಅಂಶಗಳನ್ನು ಮರೆಮಾಚುವುದು ಮಾಡುತ್ತಿದೆ. ನಾನು ರಾಜ್ಯಸಭೆಯಲ್ಲಿ ಮಾತನಾಡಿರುವುದು ರೆಕಾರ್ಡ ಇದೆ. ಇದರ ಸಂಪೂರ್ಣ ಭಾಷಣವನ್ನು ಕೇಳಿಸಿಕೊಳ್ಳಿ. ಮಾಧ್ಯಮಗಳು ನನ್ನ ಸಂಪೂರ್ಣ ಭಾಷಣವನ್ನು ಜನರ ಮುಂದೆ ತಲುಪಿಸಿ.
ಕತ್ತರಿ ಹಾಕಿ ಬೇರೊಂದು ಅರ್ಥದಲ್ಲಿ ತೋರಿಸಬೇಡಿ ಎಂದು ಮನವಿ ಮಾಡಿದ್ದರೆ. ಕಾಂಗ್ರೆಸ್ ಯಾವತ್ತೂ ಸಂವಿಧಾನ ವಿರೋಧಿ, ಅಂಬೇಡ್ಕರ್ ವಿರೋಧಿ, ಮೀಸಲಾತಿ ವಿರೋಧಿಯಾಗಿದೆ. ಸಂವಿಧಾನವನ್ನು ತುರ್ತು ಪರಿಸ್ಥಿತಿಯಲ್ಲಿ ಬಡುಮೇಲು ಮಾಡಿರುವುದು ಎಲ್ಲರೂ ನೋಡಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ.