ಬೆಳಗಾವಿ : ಅಂಬೇಡ್ಕರ್ ಅವರ ಕುರಿತು ಅಮಿತ್ ಶಾ ಹೇಳಿಕೆಗೆ ಇಂದು ವಿಧಾನಸಭೆ ಹಾಗೂ ವಿಧಾನ ಪರಿಷತ್ ಎರಡರಲ್ಲಿಯೂ ಕಾಂಗ್ರೆಸ್ ಸದಸ್ಯರು ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡಿದರು. ಈ ವೇಳೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ಎಂಎಲ್ಸಿ ಸಿಟಿ ರವಿ ಅವರು ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ, ಬೆಳಗಾವಿಯ ಸುವರ್ಣಸೌಧದ ಬಳಿ ಎಂಎಲ್ಸಿ ಸಿಟಿ ರವಿ ಅವರ ಕಾರಿಗೆ ಮುತ್ತಿಗೆ ಹಾಕಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬೆಂಬಲಿಗರು ಘೋಷಣೆ ಕೂಗಿ ಧಿಕ್ಕಾರ ಕೂಗಿದರು. ಇಂದು ಸುವರ್ಣಸೌಧಕ್ಕೆ ಕಾರಿನಲ್ಲಿ ಆಗಮಿಸಿದ ಎಂಎಲ್ಸಿ ಸಿ.ಟಿ. ರವಿ ಅವರು ಕಾರಿನಿಂದ ಕೆಳಗೆ ಇಳಿಯುತ್ತಿದ್ದಂತೆ ಏಕಾಏಕಿ ರವಿ ಅವರ ಕಾರಿನತ್ತ ನುಗ್ಗಿದ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸಿ.ಟಿ. ರವಿ ಕಾರು ಮುತ್ತಿಗೆ ಹಾಕಿದ ಕಾರ್ಯಕರ್ತರು ಹಲ್ಲೆ ಮಾಡಲು ಮುಂದಾಗಿದ್ದಾರೆ. ಈ ವೇಳೆ ಅಲ್ಲಿದ್ದ ಭದ್ರತಾ ಸಿಬ್ಬಂದಿ ಹಾಗೂ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ಹಿಡಿದು ಹಿಂದಕ್ಕೆ ತಳ್ಳಿದ್ದಾರೆ. ಈ ವೇಳೆ ಸುಮಾರು 15ರ ಜನರು ಗುಂಪುಗೂಡಿ ಸಿ.ಟಿ. ರವಿ ಅವರ ಕಾರಿಗೆ ಗುದ್ದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೋರಾದ ಗಲಾಟೆ ಶುರುವಾಗುತ್ತಿದ್ದಂತೆ ಪೊಲೀಸರ ಭದ್ರತೆಯಲ್ಲಿ ಸಿ.ಟಿ. ರವಿ ಅವರು ಪರಿಷತ್ತಿನ ಕೋಣೆಯ ಆವರಣದೊಳಗೆ ಹೋಗಿದ್ದಾರೆ. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಅವರನ್ನು ಹಿಂಬಾಲಿಸಿಕೊಂಡು ಹೋಗುವುದನ್ನು ಪೊಲೀಸರು ತಡೆದಿದ್ದಾರೆ. ಮುಂದುವರೆದು ಪೊಲೀಸರು ಸಿ.ಟಿ. ರವಿ ಅವರ ಮೇಲೆ ಹಲ್ಲೆಗೆ ಯತ್ನಿಸಿದ ಸುಮಾರು 15 ಜನರನ್ನು ಬಂಧಿಸಿದ್ದಾರೆ. ಬಿಜೆಪಿಯ ಎಂ.ಎಲ್ ಸಿ ಸಿಟಿ ರವಿ ವಿರುದ್ಧ ಧಿಕ್ಕಾರ ಕೂಗಿ ಘೋಷಣೆ ಕೂಗಿದರು. ಅಶ್ಲೀಲ ಪದ ಬಳಕೆ ಆರೋಪದ ಹಿನ್ನೆಲೆಯಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ಸಿಟಿ ರವಿಗೆ ಮುತ್ತಿಗೆ ಹಾಕಲಾಯಿತು. ಬಿಜೆಪಿ ಎಂಎಲ್ಸಿ ಸಿಟಿ ರವಿ ವಿರುದ್ಧ ಘೋಷಣೆ ಕೂಗಿದರು. ಸುವರ್ಣ ಸೌಧದ ಬಳಿ ಎಂಎಲ್ಸಿ ಸೀಟಿ ರವಿಗೆ ಮುತ್ತಿಗೆ ಹಾಕಲು ಹೆಬ್ಬಾಳ್ಕರ್ ಬೆಂಬಲಿಗರು ಮುತ್ತಿಗೆ ಹಾಕಿದರು.ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಮುತ್ತಿಗೆ ಹಾಕಲು ಯತ್ನಿಸಿದರು ಈ ವೇಳೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು
![](https://bcsuddi.com/wp-content/uploads/2024/12/22-12-24-temple-iphone.jpg)