ಬೆಂ.ಗ್ರಾ.ಜಿಲ್ಲೆ: 2024-25ನೇ ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ನೇಕಾರರ ಮಕ್ಕಳಿಗೆ ಹೆಚ್ಚಿನ ಹಾಗೂ ಉನ್ನತ ಶಿಕ್ಷಣ ಪ್ರೋತ್ಸಾಹಿಸಲು“ವಿದ್ಯಾರ್ಥಿವೇತನ”ಯೋಜನೆಯನ್ನು ಅನುಷ್ಟಾನಗೊಳಿಸಲಾಗುತ್ತಿದ್ದು, ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕರ್ನಾಟಕ ರಾಜ್ಯದ ಯಾವುದೇ ಭಾಗದಲ್ಲಿರುವ ಅಧಿಕೃತವಾಗಿ ನೊಂದಣಿಯಾಗಿರುವ ಶಿಕ್ಷಣ ಸಂಸ್ಥೆಗಳು/ ವಿಶ್ವ ವಿದ್ಯಾಲಯಗಳಲ್ಲಿ ಪದವಿಯ ಇತ್ಯಾದಿ, ಎಲ್.ಎಲ್.ಬಿ/ ಪ್ಯಾರಾ ಮೆಡಿಕಲ್/ ಬಿ.ಫಾರ್ಮ್/ ನರ್ಸಿಂಗ್ ಇತ್ಯಾದಿ ವೃತ್ತಿಪರ ಕೋರ್ಸ್ಗಳು, ಎಂಬಿಬಿಎಸ್/ ಬಿ.ಇ/ ಬಿ.ಟೆಕ್ ಮತ್ತುಎಲ್ಲಾ ಸ್ನಾತಕೋತ್ತರ ಕೋರ್ಸ್ಗಳಲ್ಲಿ ವ್ಯಾsಸಂಗ ಮಾಡುತ್ತಿರುವ ನೇಕಾರರ ಮಕ್ಕಳು ಡಿ. 31 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಪದವಿಯ ಮುಂಚೆ ಪಿಯುಸಿ/ಐಟಿಐ/ಡಿಪ್ಲೊಮೋ ರೂ.2,500/- ರಿಂದ ರೂ. 3,000/-, ಎಲ್ಲಾ ಬಿ.ಎ/ಬಿ.ಎಸ್.ಸಿ/ಬಿ.ಕಾಂ ಇತ್ಯಾದಿ ರೂ. 5,000/- ರಿಂದ ರೂ. 5,500/-, ಎಲ್.ಎಲ್.ಬಿ/ ಪ್ಯಾರ ಮೆಡಿಕಲ್/ ಬಿ ಫಾರ್ಮ್/ನರ್ಸಿಂಗ್ ಇತ್ಯಾದಿ ವೃತ್ತಿಪರ ಕೋರ್ಸ್ಗಳು ರೂ. 7,500/- ರಿಂದ ರೂ. 8000/-, ಎಂಬಿಬಿಎಸ್/ ಬಿ.ಇ/ ಬಿ.ಟೆಕ್ ಮತ್ತುಎಲ್ಲಾ ಸ್ನಾತಕೋತ್ತರ ಕೋರ್ಸ್ಗಳು ರೂ. 10,000/- ರಿಂದ ರೂ. 11,000/- ಈ ರೀತಿ ವಿದ್ಯಾರ್ಥಿ ವೇತನದ ಸದುಪಯೋಗ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಛೇರಿ, ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡ, ಕೆಐಎಡಿಬಿ ಅಪೇರಲ್ ಪಾರ್ಕ್, ದೊಡ್ಡಬಳ್ಳಾಪುರ ಇಲ್ಲಿಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.