ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಿಂದನೆ ಆರೋಪ: ಸಿಟಿ ರವಿ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ಸಲ್ಲಿಕೆ

WhatsApp
Telegram
Facebook
Twitter
LinkedIn

ಬೆಂಗಳೂರು : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿಟಿ ರವಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂಬ ಆರೋಪದ ಮೇರೆಗೆ ಅವರ ವಿರುದ್ಧ ಮಹಿಳಾ ಆಯೋಗಕ್ಕೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ದೂರು ಸಲ್ಲಿಸಲಾಗಿದೆ.

ಬೆಳಗಾವಿ ಅಧಿವೇಶನ ನಡೆಯುತ್ತಿದ್ದ ಸುವರ್ಣ ಸೌಧದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಕ್ಟರ್ ಅವರಿಗೆ ವಿಧಾನ ಪರಿಷತ್ತಿನ ಸದಸ್ಯ ಸಿ.ಟಿ. ರವಿ ಅವರು ಅಸಭ್ಯ ಮತ್ತು ಅಸಂವಿಧಾನಿಕ ಪದ ಬಳಕೆ ಮಾಡಿ ಅಪಮಾನಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿರುತ್ತದೆ ಎಂದು ದೂರು ನೀಡಲಾಗಿದೆ.

ಮಾಜಿ ಮಂತ್ರಿಯಾಗಿದ್ದು, ಹೆಣ್ಣು ಮಕ್ಕಳ ಬಗ್ಗೆ ಅಪಾರ ಕಾಳಜಿ, ಗೌರವ ಹೊಂದಿರಬೇಕಾದ ಜವಾಬ್ದಾರಿ ಸ್ಥಾನದಲ್ಲಿರುವ ವ್ಯಕ್ತಿಯೇ ಘನತವತ್ತ ಸದನದಲ್ಲಿ ಮಹಿಳಾ ಮಂತ್ರಿಯೊಬ್ಬರನ್ನು ಅತೀ ಕೀಳು ಮಟ್ಟದ ಅಸಾಂವಿಧಾನಿಕ ಪದ ಪ್ರಯೋಗ ಮಾಡಿದ್ದರೆ ಅದು ನಾಡಿನ ಇಡೀ ಹೆಣ್ಣು ಕುಲಕ್ಕೇ, ಅವರ ಭಾವನೆಗಳಿಗೆ, ಅವರ ಘನತೆಗೆ ಉಂಟು ಮಾಡಿರುವ ಅಪಮಾನ. ಹಾಗಾಗಿ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕೆಂದು ದೂರಿನಲ್ಲಿ ಮನವಿ ಮಾಡಲಾಗಿದೆ.

 

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon