ಬೆಳಗಾವಿ: ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ಬಂಧನ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.
ಬಿಜೆಪಿ ನಾಯಕರು, ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ. ಮತ್ತೊಂದೆಡೆ ಬೆಳಗಾವಿ ಕೋರ್ಟ್, ಸಿಟಿ ರವಿ ಅವರನ್ಜು ಬೆಂಗಳೂರು ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಹೌದು, ಸಚಿವೆ ಲಕ್ಷ್ಮಿ ಹೆಬ್ಬಾಳಕರ್ (Lakshmi hebbalkar) ಅವರಿಗೆ ನಿಂದನೆ ಪ್ರಕರಣದಲ್ಲಿ ಬಂಧಿಸಲಾಗಿದ್ದ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ (C.T.Ravi) ಕೇಸನ್ನು ಬೆಂಗಳೂರಿಗೆ ಸ್ಥಳಾಂತರ ಮಾಡಲಾಗಿದೆ.
ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಶುಕ್ರವಾರ (ಡಿ.20) ಬೆಳಗ್ಗೆ ಐದನೇ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಧೀಶರು ಸಿ.ಟಿ ರವಿ ಅವರ ಹೇಳಿಕೆ ಪಡೆದುಕೊಂಡು ಮಧ್ಯಾಹ್ನಕ್ಕೆ ವಿಚಾರಣೆ ಮುಂದೂಡಿದ್ದರು. ಇದೀಗ ಬೆಂಗಳೂರು ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಪ್ರಕರಣ ವರ್ಗಾವಣೆ ಮಾಡಲಾಗಿದೆ. ಈ ಪ್ರಕರಣ ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಬೆಳಗಾವಿ ಜೆ.ಎಂ.ಎಫ್.ಸಿ ನ್ಯಾಯಾಲಯ ಹೇಳಿತು. ತಕ್ಷಣವೇ ಸಿ.ಟಿ.ರವಿ ಅವರನ್ನು ಬೆಂಗಳೂರಿಗೆ ಸ್ಥಳಾಂತರ ಮಾಡಲು ಕೋರ್ಟ್ ಆದೇಶಿಸಿದೆ.