ದಾವಣಗೆರೆ :ಮಾಜಿ ಸಚಿವ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಮಾತನಾಡಿ, ನೋಟಿಸ್ ನೀಡದೆ ಬಂಧಿಸಿದ್ದಾರೆ.
4 ಜಿಲ್ಲೆಗಳಲ್ಲಿ 11 ಗಂಟೆಗಳಿಗೂ ಹೆಚ್ಚು ಕಾಲ ಅಲೆದಾಡಿಸಿ ಮಾನಸಿಕವಾಗಿ ಕುಗ್ಗಿಸುವ ಪ್ರಯತ್ನ ಮಾಡಿದ್ದಾರೆ. ದೈಹಿಕವಾಗಿ ಹಲ್ಲೆ ಮಾಡುವ ಕೆಲಸವನ್ನು ಕಾಂಗ್ರೆಸ್ ಸರಕಾರ ಪೊಲೀಸ್ ಬಲವನ್ನು ಉಪಯೋಗಿಸಿಕೊಂಡು ಮಾಡಿದೆ ಎಂದು ತಿಳಿಸಿದರು.
ನಮ್ಮ ಪಕ್ಷ, ನಮ್ಮ ರಾಜ್ಯಾಧ್ಯಕ್ಷರು, ಪಕ್ಷದ ನಾಯಕರಾದ ಅಶೋಕ್, ಛಲವಾದಿ ನಾರಾಯಣಸ್ವಾಮಿ ಅವರು, ಪಕ್ಷದ ಎಲ್ಲ ಮುಖಂಡರು, ಶಾಸಕರು, ಸಂಸದರು, ಸಾಮಾನ್ಯ ಕಾರ್ಯಕರ್ತರು ಈ ಸಂಕಷ್ಟದ ಸಮಯದಲ್ಲಿ ಜೊತೆಗೆ ನಿಂತಿದ್ದಾರೆ. ಆತ್ಮಸ್ಥೈರ್ಯವನ್ನು ತುಂಬುವುದರ ಜೊತೆಗೆ ನಿಮ್ಮ ಜೊತೆ ನಾವಿದ್ದೇವೆ ಎಂಬ ಸಂದೇಶ ಕೊಟ್ಟಿದ್ದಾರೆ ಎಂದು ಹೇಳಿದರು.ಅದಕ್ಕಾಗಿ ಅವರೆಲ್ಲರಿಗೆ ಹೃದಯಪೂರ್ವಕ ಧನ್ಯವಾದಗಳು ಎಂದು ತಿಳಿಸಿದರು.
ಕೋರ್ಟ್ ಆದೇಶದ ಕುರಿತು ಪ್ರಸ್ತಾಪಿಸಿದ ಅವರು ಸತ್ಯಕ್ಕೆ ಜಯ ಸಿಕ್ಕಿದೆ. ಇದರಿಂದ ಹಿಗ್ಗುವುದಿಲ್ಲ; ಕಾಂಗ್ರೆಸ್ ಪಕ್ಷವು ಪೊಲೀಸ್ ಬಲ ದುರ್ಬಳಕೆ ಮಾಡಿ ಕುಗ್ಗಿಸುವ ಪ್ರಯತ್ನ ಮಾಡಿದೆ. ಕುಗ್ಗುವುದೂ ಇಲ್ಲ ಎಂದರು. ಕಾಂಗ್ರೆಸ್ ಕೊಡುವ ತೊಂದರೆಯು ಇನ್ನಷ್ಟು ಗಟ್ಟಿಯಾಗುವ ಶಕ್ತಿ ಕೊಡುತ್ತದೆ ಎಂದರಲ್ಲದೆ, ಸಂಕಷ್ಟದಲ್ಲಿ ಇದ್ದಾಗ ನಮ್ಮ ಕಾರ್ಯಕರ್ತರು ನೆರವಿಗೆ ಬಂದಿದ್ದಾರೆ. ಅವರ ಋಣ ತೀರಿಸುವ ಕೆಲಸ ಮಾಡುವುದಾಗಿ ತಿಳಿಸಿದರು.