ಬೆಂಗಳೂರು : ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಅವರು ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ಅವರಿಗೆ ತಮ್ಮ ಮದುವೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ ನೀಡಿದ್ದಾರೆ.
ಡಾಲಿ ಧನಂಜಯ್ ಅವರು ಡಾಕ್ಟರ್ ಧನ್ಯತಾ ಅವರೊಂದಿಗೆ ಫೆ.16ರಂದು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಹಿನ್ನಲೆ ಸಿಎಂ, ಮಾಜಿ ಸಿಎಂಗಳಿಗೆ ಸೇರಿದಂತೆ ಅನೇಕ ರಾಜಕೀಯ ವ್ಯಕ್ತಿಗಳಿಗೆ ಹಾಗೂ ಸೆಲೆಬ್ರೆಟಿಗಳಿಗೆ ಈಗಾಗಲೇ ಆಹ್ವಾನ ಪತ್ರಿಕೆ ನೀಡಿದ್ದಾರೆ. ಇದೀಗ ಅವರು ಡಿಕೆ ಬ್ರದರ್ಸ್‌ಗೆ ಪತ್ರಿಕೆ ನೀಡಿ ಮದುವೆಗೆ ಆಹ್ವಾನಿಸಿದ್ದಾರೆ.
ಡಾಲಿ ಧನಂಜಯ್ ಅವರು ಡಿಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿ ದಂಪತಿಗೆ ಮದುವೆ ಆಹ್ವಾನಿಸಿ ಕೆಲ ಕಾಲ ಸಮಯ ಕಳೆದಿದ್ದಾರೆ. ಬಳಿಕ ಡಿಕೆ ಸುರೇಶ್‌ರನ್ನು ಭೇಟಿಯಾಗಿ ಮದುವೆಗೆ ಆಹ್ವಾನಿಸಿದ್ದಾರೆ.