ಬೆಂಗಳೂರು : ಬಿಜೆಪಿ ಸಂಸ್ಕೃತಿ, ಸಿಟಿ ರವಿ ಹೇಳಿಕೆ ಘೋರವಾದ ಅಪರಾಧ. ಯಾವುದೇ ಹೆಣ್ಣು ಮಗಳು ಊಹಿಸಿಕೊಂಡು ಈ ರೀತಿಯ ಆರೋಪ ಮಾಡಲು ಸಾಧ್ಯವಿಲ್ಲ. ಸಿ.ಟಿ ರವಿ ಬಹಿರಂಗ ಕ್ಷಮೆ ಕೇಳಿದರೆ ಎಲ್ಲಾ ಮುಗಿಯುತ್ತದೆ ಎಂದು ಸಚಿವ ಎಂಬಿ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸಿ.ಟಿ ರವಿ ಪದ ಬಳಕೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಬಗ್ಗೆ ಸಂಸ್ಕೃತಿ ಬಗ್ಗೆ ಪಾಠ ಹೇಳುತ್ತಾರೆ. ಇದು ಅವರ ಸಂಸ್ಕೃತಿ. ಪ್ರವೋಕ್ ಮಾಡಿದ್ದು ಇರಲಿ ಆದರೆ ಆ ಪದ ಬಳಕೆ ಮಾಡಿದ್ದು ತಪ್ಪು. ಲಕ್ಷ್ಮಿ ಹೆಬ್ಬಾಳ್ಕರ್ ಇರಲಿ ಅಥವ ಯಾವ ಹೆಣ್ಮಗಳು ಇರಲಿ ಷಡ್ಯಂತ್ರ ಮಾಡಿ ಹೇಳಿಕೆ ಕೊಡಲು ಆಗಲ್ಲ ಎಂದು ಕಿಡಿ ಕಾರಿದರು.
ಪ್ರಹ್ಲಾದ್ ಜೋಷಿ ಫೇಕ್ ಎನ್ಕೌಂಟರ್ ಆರೋಪ ವಿಚಾರದ ಕುರಿತು ಪ್ರತಿಕ್ರಿಯಿಸಿ, ಯಾರನ್ನು ಎನ್ಕೌಂಟರ್ ಮಾಡುವುದು? ಅದು ಫೇಕ್ ಎನ್ಕೌಂಟರ್ ಅಲ್ಲ, ಫೇಕ್ ಕೌಂಟರ್. ಅವರ ತಪ್ಪು ಮುಚ್ಚಿಕೊಳ್ಳೋಕೆ ಫೇಕ್ ಎನ್ಕೌಂಟರ್ ಎಂಬ ಫೇಕ್ ಕೌಂಟರ್ ಮಾಡುತ್ತಿದ್ದಾರೆ ಅಷ್ಟೇ ಎಂದು ಹರಿಹಾಯ್ದರು.
ಮುಂದುವರೆದು ಅವರು ನೀಡಿದ ಹೇಳಿಕೆ ಮುಚ್ಚಿ ಹಾಕಲು ಈ ರೀತಿಯ ಹೇಳಿಕೆ ನೀಡಿದ್ದಾರೆ. ಬಳಸಿದ ಪದಕ್ಕೆ ಪ್ರತಿಯಾಗಿ ಇದೆಲ್ಲ ಸೃಷ್ಟಿಸುತ್ತಿದ್ದಾರೆ ಎಂದು ಹೇಳಿದರು.