ಕೋಲಾರ: ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ವಸತಿ ನಿಲಯದ ಕೊಠಡಿಯಲ್ಲಿ ತಾನು ಮಲಗುವ ಮಂಚಕ್ಕೆ ನೇಣುಬಿಗಿದುಕೊಂಡು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
17 ವರ್ಷದ ಬಿಂದುಶ್ರೀ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಹಾಸ್ಟೇಲ್ ಮಂಚಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ನಿರ್ಧಾರಕ್ಕೆ ಕಾರಣ ತಿಳಿದುಬಂದಿಲ್ಲ.
ಮೃತ ವಿದ್ಯಾರ್ಥಿನಿ ಚಿಕ್ಕಬಳ್ಳಾಪುರ ಮೂಲದ ಗಂಗರೆಕಾಲುವೆ ನಿವಾಸಿ. ಶ್ರೀನಿವಾಸಪುರ ಹೊರವಲಯದಲ್ಲಿರುವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಳು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.