ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ ಹತ್ಯೆ ಹೊಣೆಯನ್ನು ಇಸ್ರೇಲ್ ಹೊತ್ತುಕೊಂಡಿದೆ. ಹೌದು, 2024ರ ಜುಲೈ ತಿಂಗಳಲ್ಲಿ ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ ಹತ್ಯೆಯನ್ನ ಮಾಡಲಾಗಿತ್ತು.
ಇರಾನ್ ನೆಲದಲ್ಲಿ ನಡೆದಿದ್ದ ಈ ಘಟನೆ ಭಾರಿ ದೊಡ್ಡ ಸಂಚಲನ ಸೃಷ್ಟಿಸಿ ಇಡೀ ಜಗತ್ತಿನ ಗಮನ ಸೆಳೆದಿತ್ತು. ಹೀಗಿದ್ದಗಲೇ ಇದೀಗ ಇಸ್ರೇಲ್ ಈ ಹತ್ಯೆ ಬಗ್ಗೆ ಸ್ಪಷ್ಟನೆಯನ್ನ ನೀಡಿದ್ದು, ಮತ್ತಷ್ಟು ಸಂಚಲನ ಸೃಷ್ಟಿಯಾಗಿದೆ. ಇದೀಗ ಹಮಾಸ್ ನಾಯಕನ ಹತ್ಯೆಯ ಸತ್ಯ ಬಟಾಬಯಲಾಗಿದೆ. ಸ್ವತಃ ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಅವರು ಈ ಸ್ಫೋಟಕ ವಿಚಾರ ಬಿಚ್ಚಿಟ್ಟಿದ್ದಾರೆ. ಇಸ್ಮಾಯಿಲ್ ಹತ್ಯೆ ಮಾಡಿದ್ದು ನಾವೇ ಎಂದು ಇಸ್ರೇಲ್ ರಕ್ಷಣಾ ಸಚಿವರು ಹೇಳಿದ್ದಾರೆ.
ಈ ಕುರಿತು ಮಾತನಾಡಿದ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್, ಯೆಮೆನ್‌ನ ಹೌತಿ ಬಂಡುಕೋರರ ನಾಯಕತ್ವವನ್ನು ಸೇನೆಯು “ಶಿರಚ್ಛೇದನ” ಮಾಡಲಿದೆ. ಅಲ್ಲದೇ ಹಮಾಸ್ ಮಾಜಿ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ ಅವರನ್ನು ಕೊಂದಿದ್ದು ನಾವೆ ಎಂದು ಹೇಳಿದ್ದಾರೆ. ಈ ಮೂಲಕ ಮೊದಲ ಬಾರಿಗೆ ಇಸ್ಮಾಯಿಲ್ ಹತ್ಯೆ ಬಗ್ಗೆ ಇಸ್ರೇಲ್ ಒಪ್ಪಿಕೊಂಡಿದೆ.