ನವದೆಹಲಿ : ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಮತ್ತು ಪುನರ್ರಚನೆ ಮಾಡಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು 2021-22ರಿಂದ 2025-26ರವರೆಗೆ ಒಟ್ಟಾರೆ 69,515.71 ಕೋಟಿ ರೂ.ಗಳೊಂದಿಗೆ 2025-26ರವರೆಗೆ ಮುಂದುವರಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿದೆ.
ಸುದ್ದಿಗಾರರಿಗೆ ಈ ಕುರಿತು ಮಾಹಿತಿ ನೀಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ಈ ನಿರ್ಧಾರವು 2025-26 ರವರೆಗೆ ದೇಶಾದ್ಯಂತ ರೈತರಿಗೆ ನೈಸರ್ಗಿಕ ವಿಕೋಪಗಳಿಂದ ಉಂಟಾಗುವ ಬೆಳೆಗಳ ನಾಶದಿಂದ ಬಚಾವಾಗಲು ಸಹಾಯ ಮಾಡುತ್ತದೆ ಎಂದರು.
ತಂತ್ರಜ್ಞಾನವನ್ನು ಬಳಸಿಕೊಂಡು ಕನಿಷ್ಠ ಶೇ. 30ರಷ್ಟು ತೂಕದೊಂದಿಗೆ ಇಳುವರಿ ಅಂದಾಜಿಗಾಗಿ ರಿಮೋಟ್ ಸೆನ್ಸಿಂಗ್ ತಂತ್ರಜ್ಞಾನವನ್ನು ಬಳಸಲಾಗುತ್ತದೆ. 9 ಪ್ರಮುಖ ರಾಜ್ಯಗಳು ಪ್ರಸ್ತುತ ಇದನ್ನು ಜಾರಿಗೊಳಿಸುತ್ತಿವೆ. ಅವುಗಳೆಂದರೆ, ಆಂಧ್ರ ಪ್ರದೇಶ, ಅಸ್ಸಾಂ, ಹರಿಯಾಣ, ಉತ್ತರ ಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ, ತಮಿಳುನಾಡು ಮತ್ತು ಕರ್ನಾಟಕ. ಉಳಿದ ರಾಜ್ಯಗಳಲ್ಲೂ ಇದನ್ನು ಶೀಘ್ರದಲ್ಲೇ ಜಾರಿಗೊಳಿಸಲಾಗುವುದು.