ಬೆಂಗಳೂರು: ಇಂದು ಕೋರ್ಟ್ಗೆ ಹಾಜರಾದ ಪವಿತ್ರಾ ಗೌಡ ಹೊರ ರಾಜ್ಯದ ದೇವಸ್ಥಾನಕ್ಕೆ ತೆರಳಲು ಅನುಮತಿ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ.
57ನೇ ಸಿಸಿಹೆಚ್ ನ್ಯಾಯಾಧೀಶರ ಮುಂದೆ ಪವಿತ್ರಾ ಪರ ವಕೀಲರು, ಹೊರ ರಾಜ್ಯದ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲು ಒಂದು ತಿಂಗಳ ಕಾಲಾವಕಾಶ ನೀಡುವಂತೆ ಕೋರಿದರು.
ಸರ್ಕಾರಿ ವಕೀಲರುಈ ಅರ್ಜಿಗೆ ಪ್ರಬಲವಾಗಿ ಆಕ್ಷೇಪ ವ್ಯಕ್ತಪಡಿಸಿದರೆ ಕೋರ್ಟ್ ಈ ಅರ್ಜಿಯನ್ನು ತಿರಸ್ಕರಿಸಬಹುದು.ಇಂದು ನ್ಯಾಯಾಧೀಶರು ಅರ್ಜಿ ವಿಚಾರಣೆಯನ್ನು ಫೆ. 25ಕ್ಕೆ ಮುಂದೂಡಿದ್ದಾರೆ.
ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಮಂದಿಗೆ ಕರ್ನಾಟಕ ಹೈಕೋರ್ಟ್ ಡಿ. 13 ರಂದು ಜಾಮೀನು ಮಂಜೂರು ಮಾಡಿತ್ತು. ಆದೇಶದಲ್ಲಿ ಏಳು ಆರೋಪಿಗಳಿಗೆ, ಕೋರ್ಟ್ ಅನುಮತಿ ಇಲ್ಲದೇ ಬೆಂಗಳೂರು ಬಿಟ್ಟು ಹೋಗುವಂತಿಲ್ಲ. ಪ್ರತಿ ತಿಂಗಳು ಎಲ್ಲಾ ಆರೋಪಿಗಳು ಕೋರ್ಟ್ಗೆ ಹಾಜರಾಗಬೇಕು ಎಂದು ಷರತ್ತು ವಿಧಿಸಿತ್ತು.