ಕೊಟ್ಟಾಯಂ : ಧಾರ್ಮಿಕ ದ್ವೇಷವನ್ನು ಕೆರಳಿಸುವಂತಹ ಹೇಳಿಕೆಗಳನ್ನು ನೀಡಿದ ಆರೋಪದ ಮೇರೆಗೆ ಕೇರಳ ಬಿಜೆಪಿ ನಾಯಕ ಪಿ.ಸಿ. ಜಾರ್ಜ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಇತ್ತೀಚೆಗೆ ಖಾಸಗಿ ವಾಹಿನಿಯೊಂದರ ಚರ್ಚಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಜಾರ್ಜ್ ಅವರು ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ದ್ವೇಷಪೂರಿತ ಭಾಷಣ ಮಾಡಿದ್ದರು. ಈ ಬಗ್ಗೆ ಮುಸ್ಲಿಂ ಯೂತ್ ಲೀಗ್ ಮುನ್ಸಿಪಲ್ ಸಮಿತಿ ನೀಡಿದ ದೂರಿನ ಆಧಾರದ ಮೇಲೆ ಕೊಟ್ಟಾಯಂನ ಎರಟ್ಟುಪೇಟೆ ಪೊಲೀಸರು ಜಾರ್ಜ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.
ಜಾರ್ಜ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್ಎಸ್) ವಿವಿಧ ಸೆಕ್ಷನ್ಗಳಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕೇರಳದ ಬಿಜೆಪಿ ಉಸ್ತುವಾರಿ ಪ್ರಕಾಶ್ ಜಾವಡೇಕರ್ ಅವರು, ಜಾರ್ಜ್ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿರುವುದನ್ನು ಖಂಡಿಸಿದ್ದಾರೆ. ಜೊತೆಗೆ ‘ಇದು ಎಲ್ಡಿಎಫ್ ಸರ್ಕಾರದ ರಾಜಕೀಯ ಸೇಡಿನ ಕ್ರಮವಾಗಿದೆ’ ಎಂದು ತಿಳಿಸಿದ್ದಾರೆ.