ರಾಯ್ಪುರ್ : ಭದ್ರತಾ ಸಿಬ್ಬಂದಿ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮಾವೋವಾದಿಗಳು ಸಾವನ್ನಪ್ಪಿದ ಘಟನೆ ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನಡೆದಿದೆ.
ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿಯ ತಂಡ ಮಾವೋವಾದಿ ವಿರೋಧಿ ಕಾರ್ಯಾಚರಣೆ ನಡೆಸಿದೆ. ಈ ವೇಳೆ ಭದ್ರತಾ ಸಿಬ್ಬಂದಿ ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಗುಂಡಿನ ಚಕಮಕಿ ನಿಂತ ನಂತರ ಮೂವರು ಮಾವೋವಾದಿಗಳ ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೇ ಘಟನಾ ಸ್ಥಳದಲ್ಲಿ, ಸ್ವಯಂಚಾಲಿತ ಬಂದೂಕುಗಳು ಮತ್ತು ಸ್ಫೋಟಕಗಳು ಪತ್ತೆಯಾಗಿವೆ. ಈ ಪ್ರದೇಶದಲ್ಲಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.