ಬೆಂಗಳೂರು : ಚಾಮರಾಜಪೇಟೆಯಲ್ಲಿ ಹಸುಗಳ ಮೇಲೆ ಕ್ರೌರ್ಯವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಕಾಟನ್ಪೇಟೆ ಪೊಲೀಸರು ಬಂಧಿಸಿದ್ದಾರೆ. ಬಳಿಕ ಸ್ಥಳ ಮಹಜರು ನಡೆಸಿದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಸೋಕೋ ಟೀಂ ತಡರಾತ್ರಿಯಿಂದಲೇ ವಿಚಾರಣೆ ಆರಂಭಿಸಿದೆ.
ವಿನಾಯಕ ನಗರದಲ್ಲಿ ರಾತ್ರಿವೇಳೆ ಬೀದಿಯಲ್ಲಿ ಮಲಗಿದ್ದ ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರುವ ಘಟನೆ ಭಾನುವಾರ ನಡೆದಿತ್ತು. ಕರ್ಣ ಎಂಬುವರಿಗೆ ಸೇರಿದ್ದ ಹಸುಗಳು ಇದಾಗಿತ್ತು. ಸದ್ಯ ಹಸುಗಳಿಗೆ ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಘಟನೆ ಬೆಳಕಿಗೆ ಬರುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಕೂಡ ಪ್ರತಿಕ್ರಿಯಿಸಿ ಹಸುಗಳ ಮೇಲೆ ಕ್ರೌರ್ಯ ಮೆರೆದ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದರು. ಇದೀಗ ಓರ್ವನ ಬಂಧನವಾಗಿದ್ದು ವಿಚಾರಣೆ ಮುಂದುವರೆದಿದೆ.