ಬೆಂಗಳೂರು: ಚಾಮರಾಜಪೇಟೆಯಲ್ಲಿ ಗೋಮಾತೆಯ ಕೆಚ್ಚಲನ್ನು ಕೊಯ್ದು ವಿಕೃತಿ ಮೆರೆದ ಅಮಾನವೀಯ ಕೃತ್ಯವನ್ನು ಖಂಡೀಸಿ ಗೋ ಸಂರಕ್ಷಣಾ ಸಂವರ್ಧನ ಸಮಿತಿ ಬೃಹತ್ ಪ್ರತಿಭಟನೆಯನ್ನು ನಡೆಸಲು ತೀರ್ಮಾನ ಮಾಡಿದೆ.
ಈ ಪ್ರತಿಭಟನೆಯ ಪೂರ್ವಭಾವಿ ಸಭೆ ಇಂದು ಸಂಜೆ 5 ಗಂಟೆಗೆ ನಿಗದಿಯಾಗಿದ್ದು ಚಾಮರಾಜಪೇಟೆಯಲ್ಲಿರುವ ಸಿದ್ದಾಶ್ರಮದಲ್ಲಿ ಸಭೆ ನಡೆಯಲಿದೆ. ರಾಜ್ಯದ ಮೂಲೆ ಮೂಲೆ ಹಿಂದೂ ಸಂಘಟನೆ ಭಾಗಿ ಆಗಲಿದ್ದು ಹಲವು ಮಜಲುಗಳಿಂದ ಸಭೆ ಮಹತ್ವ ಪಡೆದುಕೊಂಡಿದೆ.