ಕಲಬುರಗಿ: ಕಲಬುರಗಿ ಜಿಲ್ಲೆಯ ವಾಡಿಯಲ್ಲಿ ಹೃದಯಾಘಾತದಿಂದ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ನಡೆದಿದೆ. ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದ ಕೊರೇಶ್ ಸಿದ್ದಣ್ಣ ಮದ್ರಿ(17) ಮೃತಪಟ್ಟ ವಿದ್ಯಾರ್ಥಿ ಎಂದು ತಿಳಿದುಬಂದಿದೆ.
ಕಲಬುರಗಿಯಲ್ಲಿ ಪ್ಯಾರಾಮೆಡಿಕಲ್ ಓದುತ್ತಿದ್ದ ಕೊರೇಶ್ ಗೆ ಮಂಗಳವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ಎದೆ ನೋವು ಕಾಣಿಸಿಕೊಂಡಿದೆ. ಸ್ನೇಹಿತರಾದ ಪ್ರಶಾಂತ್ ಮತ್ತು ಕಿರಣ್ ಅವರೊಂದಿಗೆ ಬೈಕ್ ನಲ್ಲಿ ನಾಲವಾರ ಸ್ಟೇಷನ್ ಖಾಸಗಿ ಆಸ್ಪತ್ರೆಗೆ ತೆರಳುವ ಸಂದರ್ಭದಲ್ಲಿ ಮಾರ್ಗ ಮಧ್ಯದಲ್ಲಿಯೇ ಮೃತಪಟ್ಟಿದ್ದಾರೆ.
ಸ್ನೇಹಿತರು ಬೈಕ್ ನಿಲ್ಲಿಸಿ ಆಟೋ ಮೂಲಕ ಕೊರೇಶ್ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾರೆ.