ಬೆಂಗಳೂರು: ಮಾದಕವಸ್ತು ಸೇವನೆ, ಮಾರಾಟ ಹಾಗೂ ಮೋಜಿನ ಕೂಟ (ರೇವ್ ಪಾರ್ಟಿ) ಆಯೋಜನೆ ಆರೋಪದಲ್ಲಿ ನಟಿ ರಾಗಿಣಿ ದ್ವಿವೇದಿ ಹಾಗೂ ಪ್ರಶಾಂತ ರಂಕ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.
ಪ್ರಕರಣ ರದ್ದುಪಡಿಸುವಂತೆ ಕೋರಿ ರಾಗಿಣಿ ದ್ವಿವೇದಿ ಹಾಗೂ ಪ್ರಶಾಂತ ರಂಕ ಸಲ್ಲಿಸಿದ್ದ ಅರ್ಜಿಗಳನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಪ್ರಕರಣ ರದ್ದುಪಡಿಸಿ ಆದೇಶಿಸಿದೆ.