ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಪಕ್ಷದ ಶಾಸಕರಿಗೆ ಸಂಕ್ರಾಂತಿ ದಿನದಂದು ಬಂಪರ್ ಗಿಫ್ಟ್ ನೀಡಿದ್ದಾರೆ. ಶಾಸಕರಿಗೆ ತಲಾ 10 ಕೋಟಿ ಅನುದಾವನವನ್ನು ಘೋಷಣೆ ಮಾಡಿದ್ದಾರೆ.
ಶಾಸಕರಿಗೆ ಅನುದಾನ ಬಿಡುಗಡೆಯ ಬಗ್ಗೆ ಬಿಜೆಪಿ ನಾಯಕರು ಕಳೆದ ಬೆಳಗಾವಿಯಲ್ಲಿ ನಡೆದ ಚಳಿಗಾಲದ ವಿಧಾನ ಮಂಡಲದ ಅಧಿವೇಶನದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದರು. ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದಂತ ಸಿಎಲ್ಪಿ ಸಭೆಯಲ್ಲಿ ಶಾಸಕರಿಗೆ ಅನುದಾನವನ್ನು ನೀಡುವ ಘೋಷಣೆ ಮಾಡಿದ್ದಾರೆ.
ಎಲ್ಲಾ ಪಕ್ಷದ ಶಾಸಕರಿಗೂ ತಲಾ 10 ಕೋಟಿ ಅನುದಾನವನ್ನು ನೀಡಿದ್ದೇವೆ. ಬಿಜೆಪಿ, ಜೆಡಿಎಸ್ ಶಾಸಕರಿಗೂ 10 ಕೋಟಿ ಅನುದಾನ ಕೊಡ್ತಿರೋದಾಗಿ ಘೋಷಿಸಿದರು. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಕಾಂಗ್ರೆಸ್ ಪಕ್ಷ ಹೋರಾಟ, ತ್ಯಾಗ, ಬಲಿದಾನಗಳಿಂದ ಕಟ್ಟಿದ್ದಾಗಿದೆ. ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿ ದೇಶಕ್ಕಾಗಿ ಹುತಾತ್ಮರಾದರು. ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿ ಅವರು ತಮ್ಮ ಪಾಲಿಗೆ ಒದಗಿ ಬಂದಿದ್ದ ಪ್ರಧಾನಿ ಹುದ್ದೆಯನ್ನು ತ್ಯಾಗ ಮಾಡಿ ಮನಮೋಹನ್ ಸಿಂಗ್ ಅವರನ್ನು ಪ್ರಧಾನಿ ಮಾಡಿದರು. ಈ ಆದರ್ಶಗಳ ಮಾರ್ಗದಲ್ಲಿ ನಾವು ಮುನ್ನಡೆಯೋಣ ಎಂದರು.