ಚಿಕ್ಕಬಳ್ಳಾಪುರ: ಕೆಂಪೇಗೌಡ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ 23 ಕೋಟಿ ಮೌಲ್ಯದ ಗಾಂಜಾವನ್ನು ಸೀಜ್ ಮಾಡಿದ್ದಾರೆ.
ಎಲ್ಲಿಂದ ಬಂದಿತ್ತು ಈ ಗಾಂಜಾ..?
ವಿದೇಶದಿಂದ ಅಕ್ರಮವಾಗಿ ತಂದಿದ್ದ 23 ಕೆಜಿ ಗಾಂಜಾವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಹೈಡ್ರೋಪೋನಿಕ್ಸ್ ಗಾಂಜಾ (hydroponic ganja), ಮೈರವಾನ್ ಗಾಂಜಾ ಹೂ ಸೇರಿದಂತೆ ವಿವಿಧ ಬಗೆಯ ಗಾಂಜಾ ಪತ್ತೆಯಾಗಿದೆ. ಬ್ಯಾಂಕಾಕ್ನಿಂದ ಬೆಂಗಳೂರಿಗೆ 23 ಕೋಟಿ ಮೌಲ್ಯದ ಮಾದಕ ವಸ್ತು ಬರುತ್ತಿತ್ತು.
ಮೂವರಯ ಆರೋಪಿಗಳು ಲಗೇಜ್ ಬ್ಯಾಗ್ನಲ್ಲಿ ತುಂಬಿಕೊಂಡು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದರು. ಪರಿಶೀಲನೆ ವೇಳೆ ಗಾಂಜಾ ಸಮೇತ ಆರೋಪಿಗಳನ್ನು ಬಂಧಿಸಲಾಗಿದೆ. ಮಾರುಕಟ್ಟೆಯಲ್ಲಿ ಹೈಡ್ರೋಪೋನಿಕ್ ಗಾಂಜಾಗೆ ಹೆಚ್ಚು ಬೆಲೆ ಇದೆ. ಎನ್ಡಿಪಿಎಸ್ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸ್ತಿದ್ದಾರೆ.