ಕೋಲ್ಕತ್ತಾ : ಆರ್ಜಿ ಕರ್ ಆಸ್ಪತ್ರೆಯ ಟ್ರೈನಿ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಬಂಧಿತ ಸಂಜಯ್ ರಾಯ್ ದೋಷಿ ಎಂದು ಕೋರ್ಟ್ ತೀರ್ಪು ನೀಡಿದ್ದು, ಇಂದು ಶಿಕ್ಷೆಯ ಪ್ರಮಾಣ ಪ್ರಕಟಿಸಲಿದೆ.
ಪ್ರಕರಣದ ವಿಚಾರಣೆ ನಡೆಸಿದ ಕೋಲ್ಕತ್ತಾ ಸೆಷನ್ಸ್ ಕೋರ್ಟ್ ನ್ಯಾಯಾಧೀಶ ಅನಿರ್ಬನ್ ದಾಸ್ ಅವರು ಭಾರತೀಯ ನ್ಯಾಯ ಸಂಹಿತೆಯ (ಬಿಎನ್ಎಸ್) ಸೆಕ್ಷನ್ 64 (ಅತ್ಯಾಚಾರ), ಸೆಕ್ಷನ್ 66 (ಮಹಿಳೆಯ ಸಾವಿಗೆ ಕಾರಣವಾಗುವುದು) ಹಾಗೂ ಸೆಕ್ಷನ್ 103(1) (ಹತ್ಯೆ) ಅಡಿಯಲ್ಲಿ ಬಂಧಿತ ಸಂಜಯ್ ರಾಯ್ನನ್ನು ದೋಷಿ ಎಂದು ತೀರ್ಪು ನೀಡಿದ್ದರು.
ಸೆಕ್ಷನ್ 103(1)ರ ಅಡಿಯಲ್ಲಿ ಸಮಜಯ್ ರಾಯ್ಗೆ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆ ವಿಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.