ಗೃಹಲಕ್ಷ್ಮಿ ಯೋಜನೆಯ ಹಣ ಕೆಲವು ತಾಂತ್ರಿಕ ತೊಂದರೆಯಿಂದ ಸಮಸ್ಯೆಯಾಗಿದೆಯೇ ಹೊರತು ಕಳೆದ ಎರಡು ಮೂರು ತಿಂಗಳುಗಳ ಹಣ ಒಟ್ಟಿಗೆ ಖಾತೆಗೆ ಜಮೆಯಾಗಲಿದೆ ಎಂದು ಡಾ.ಪುಷ್ಪಾ ಅಮರನಾಥ್
ಭರವಸೆ ನೀಡಿದ್ದಾರೆ.
ಈ ಕುರಿತು ಕೊಡಗಿನ ಪಟ್ಟಣದ ಶಾಸಕರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಐದು ಗ್ಯಾರಂಟಿ ಯೋಜನೆಯ ಪ್ರಯೋಜನವನ್ನು ಪಡೆಯುತ್ತಿರುವ ಪ್ರತಿ ಕುಟುಂಬಕ್ಕೆ
ಸುಮಾರು 7 ಸಾವಿರ ರೂಪಾಯಿಗಳ ಖರ್ಚನ್ನು ಸರಕಾರವೇ ಭರಿಸುತ್ತಿದೆ. ಗೃಹಲಕ್ಷ್ಮಿ ಯೋಜನೆಯ ಹಣ ಕೆಲವು ತಾಂತ್ರಿಕ ತೊಂದರೆಯಿಂದ ಸಮಸ್ಯೆಯಾಗಿದೆಯೇ
ಹೊರತು ಕಳೆದ ಮೂರು ತಿಂಗಳುಗಳ 6000 ರೂ. ಹಣ ಒಟ್ಟಿಗೆ ಜಮೆಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.