ವಾಷಿಂಗ್ಟನ್ : ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಗೆ ಭಾರತೀಯ ಮೂಲದ ಯುವಕ ಹತ್ಯೆಯಾದ ಘಟನೆ ಅಮೆರಿಕದ ವಾಷಿಂಗ್ಟನ್ ಡಿಸಿಯ ಗ್ಯಾಸ್ ಸ್ಟೇಷನ್ನಲ್ಲಿ ನಡೆದಿದೆ.
ರವಿತೇಜ (26) ಮೃತ ಯುವಕ. ರವಿತೇಜ ಹೈದರಾಬಾದ್ನ ಆರ್ಕೆ ಪುರಂ ಗ್ರೀನ್ ಹಿಲ್ಸ್ ಕಾಲೋನಿಯ ನಿವಾಸಿಯಾಗಿದ್ದು, ಸ್ನಾತಕೋತ್ತರ ಪದವಿ ಪಡೆಯುವ ಸಲುವಾಗಿ 2022ರಲ್ಲಿ ಅಮೆರಿಕಗೆ ತೆರಳಿದ್ದರು. ಶಿಕ್ಷಣ ಮುಗಿಸಿದ ಬಳಿಕ ಅಲ್ಲಿಯೇ ಉದ್ಯೋಗ ನೋಡುತ್ತಿದ್ದ.
ಸ್ಥಳೀಯ ಪೊಲೀಸರು ದಾಳಿಯ ಹಿಂದಿನ ಉದ್ದೇಶವನ್ನು ತನಿಖೆ ಮಾಡುತ್ತಿದ್ದಾರೆ ಮತ್ತು ದುಷ್ಕರ್ಮಿಗಳನ್ನು ಗುರುತಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಕಳೆದ ಕೆಲವು ತಿಂಗಳುಗಳಲ್ಲಿ ಅಮೆರಿಕದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಗಳು ಕೊಲ್ಲಲ್ಪಟ್ಟ ಹಲವಾರು ಘಟನೆಗಳು ಬೆಳಕಿಗೆ ಬಂದಿವೆ.