ಪಾಟ್ನಾ: ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಿಹಾರ, ಉತ್ತರ ಪ್ರದೇಶದ ಜನರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಈ ಹಿನ್ನೆಲೆ ಅವರ ವಿರುದ್ಧ ಪಾಟ್ನಾ ಸಿವಿಲ್ ನ್ಯಾಯಾಲಯದಲ್ಲಿ ಕೇಸ್ ದಾಖಲಾಗಿದೆ. ಜನವರಿ 9ರಂದು ಕೇಜ್ರಿವಾಲ್ ನೀಡಿದ ಈ ಹೇಳಿಕೆಯು ಎರಡೂ ರಾಜ್ಯಗಳ ನಿವಾಸಿಗಳಲ್ಲಿ ಆಕ್ರೋಶಕ್ಕೆ ಕಾರಣವಾಯಿತು.
ಭಾರತೀಯ ನ್ಯಾಯ್ ಸಂಹಿತಾ (ಬಿಎನ್ಎಸ್) ಸೆಕ್ಷನ್ 356ರ ಅಡಿಯಲ್ಲಿ ವಕೀಲ ಬಬ್ಲು ಕುಮಾರ್ ದೂರು ದಾಖಲಿಸಿದ್ದಾರೆ. ಈ ಹೇಳಿಕೆಯು ಬಿಹಾರ ಮತ್ತು ಉತ್ತರ ಪ್ರದೇಶದ ಜನರ ಘನತೆ ಮತ್ತು ಭಾವನೆಗಳನ್ನು ಅವಮಾನಿಸಿದೆ ಎಂದು ಕುಮಾರ್ ಹೇಳಿದ್ದಾರೆ. ಈ ಪ್ರಕರಣದ ವಿಚಾರಣೆ ಜನವರಿ 21 ರಂದು ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಸಿಜೆಎಂ) ನ್ಯಾಯಾಲಯದಲ್ಲಿ ನಡೆಯಲಿದೆ.
“ಅರವಿಂದ್ ಕೇಜ್ರಿವಾಲ್ ಅವರ ಹೇಳಿಕೆಯು ಬಿಹಾರ ಮತ್ತು ಉತ್ತರ ಪ್ರದೇಶದ ಜನರ ಭಾವನೆಗಳನ್ನು ನೋಯಿಸಿದ್ದಾರೆ. ಆದ್ದರಿಂದ ಈ ದೂರು ದಾಖಲಿಸಲಾಗಿದೆ” ಎಂದು ಕುಮಾರ್ ಹೇಳಿದರು.