ಮುಂಬೈ: ಭಾರತ ತಂಡವು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ರೆಡಿಯಾಗುತ್ತಿದ್ದಾರೆ. ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಇಂಡಿಯನ್ ಪ್ರೀಮಿಯರ್ ಲೀಗ್ಗಾಗಿ ಅಭ್ಯಾಸ ಆರಂಭಿಸಿದ್ದಾರೆ.
ಐಪಿಎಲ್ ಆರಂಭಕ್ಕೆ ಇನ್ನೂ ಎರಡು ತಿಂಗಳಿದ್ದು, ಅದಕ್ಕೂ ಮುನ್ನವೇ ಧೋನಿ ಟೂರ್ನಿಗಾಗಿ ತಯಾರಿಗಳನ್ನು ಆರಂಭಿಸಿದ್ದಾರೆ. ಮಹೇಂದ್ರ ಸಿಂಗ್ ಧೋನಿ ಮುಂಬರುವ ಐಪಿಎಲ್ ಸೀಸನ್ಗಾಗಿ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದರೊಂದಿಗೆ ಐಪಿಎಲ್ 2025 ರಲ್ಲೂ ಧೋನಿ ಕಣಕ್ಕಿಳಿಯುವುದು ಖಚಿತವಾಗಿದೆ.
ಐಪಿಎಲ್ 2025 ಮಹೇಂದ್ರ ಸಿಂಗ್ ಧೋನಿ ಪಾಲಿಗೆ ಕೊನೆಯ ಐಪಿಎಲ್ ಟೂರ್ನಿ ಎನ್ನಲಾಗುತ್ತಿದೆ. 43 ವರ್ಷದ ಎಂಎಸ್ಡಿ ಕಳೆದ ಸೀಸನ್ನಲ್ಲೇ ನಿವೃತ್ತಿ ಘೋಷಿಸಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು.
ಇದೀಗ ಮತ್ತೊಮ್ಮೆ ಧೋನಿಯ ನಿವೃತ್ತಿ ಸುದ್ದಿಗಳು ಮುನ್ನಲೆಗೆ ಬಂದಿದೆ. ಐಪಿಎಲ್ 2025 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ 6ನೇ ಟ್ರೋಫಿ ಗೆದ್ದುಕೊಡುವ ಮೂಲಕ ಧೋನಿ ನಿವೃತ್ತರಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.