ಮುಂಬೈ : ರಶ್ಮಿಕಾ ಮಂದಣ್ಣಅವರು ‘ಪುಷ್ಪ 2’ ಯಶಸ್ಸಿನ ನಂತರ ಮತ್ತೊಂದು ಬಿಗ್ ಬಜೆಟ್ ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಐತಿಹಾಸಿಕ ಸಿನಿಮಾದಲ್ಲಿ ಮಹಾರಾಣಿಯ ಪಾತ್ರದಲ್ಲಿ ನಟಿ ಕಾಣಿಸಿಕೊಂಡಿದ್ದಾರೆ. ಅವರ ಪಾತ್ರದ ಲುಕ್ ಅನ್ನು ಚಿತ್ರತಂಡ ಅನಾವರಣ ಮಾಡಿದೆ.
ಬಾಲಿವುಡ್ ನಟ ವಿಕ್ಕಿ ಕೌಶಲ್ ನಟನೆಯ ‘ಛಾವಾ’ ಸಿನಿಮಾದಲ್ಲಿ ವಿಕ್ಕಿಗೆ ಜೋಡಿಯಾಗಿ ರಶ್ಮಿಕಾ ಮಿಂಚಿದ್ದಾರೆ. ಮಹಾರಾಣಿ ಯೇಸುಬಾಯಿ ಪಾತ್ರದಲ್ಲಿ ನಟಿ ಕಂಗೊಳಿಸಿದ್ದಾರೆ. ನಟಿಯ ಲುಕ್ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಈ ಚಿತ್ರವನ್ನು ಲಕ್ಷಮಣ್ ಉತ್ತೇಕರ್ ಅವರು ನಿರ್ದೇಶನ ಮಾಡಿದ್ದಾರೆ.
ಜ.22ರಂದು ‘ಛಾವಾ’ ಸಿನಿಮಾ ಮೊದಲ ಟ್ರೇಲರ್ ರಿಲೀಸ್ ಆಗಲಿದೆ. ವಿಕ್ಕಿ ಕೌಶಲ್ ಮತ್ತು ರಶ್ಮಿಕಾ ಕಾಂಬಿನೇಷನ್ನ ಐತಿಹಾಸಿಕ ಸಿನಿಮಾಗಾಗಿ ಫ್ಯಾನ್ಸ್ ಎದುರು ನೋಡುತ್ತಿದ್ದಾರೆ.