ನವದೆಹಲಿ: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಕನ್ನಡ ನಟ ದರ್ಶನ್ ತೂಗುದೀಪ, ನಟಿ ಪವಿತ್ರಾ ಗೌಡ ಮತ್ತು ಇತರ ಐವರಿಗೆ ನೀಡಲಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.
ಆದರೆ ಕರ್ನಾಟಕ ಸರ್ಕಾರದ ಅರ್ಜಿಯನ್ನು ಪರಿಶೀಲಿಸಲು ಒಪ್ಪಿಕೊಂಡಿದೆ. ಹೌದು. ಕರ್ನಾಟಕ ಹೈಕೋರ್ಟ್ನ ಜಾಮೀನು ಆದೇಶದ ವಿರುದ್ಧ ರಾಜ್ಯ ಸರ್ಕಾರ ಸಲ್ಲಿಸಿದ ಅರ್ಜಿಯ ಮೇರೆಗೆ ನ್ಯಾಯಮೂರ್ತಿಗಳಾದ ಜೆ ಬಿ ಪಾರ್ದಿವಾಲ ಮತ್ತು ಆರ್ ಮಹಾದೇವನ್ ಅವರ ಪೀಠವು ದರ್ಶನ್ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿತ್ತು. ಆದರೆ ದರ್ಶನ್ ಹಾಗೂ ಗ್ಯಾಂಗ್ಗೆ ಜಾಮೀನು ನೀಡಿರುವ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಎತ್ತಿ ಹಿಡಿದಿದೆ.
ಹೀಗಾಗಿ ದರ್ಶನ್ ಹಾಗೂ ಗ್ಯಾಂಗ್ಗೆ ಬಿಗ್ ರಿಲೀಫ್ ಸಿಕ್ಕಂತೆ ಆಗಿದೆ. ಕರ್ನಾಟಕ ಹೈಕೋರ್ಟ್ ಡಿಸೆಂಬರ್ 13, 2024 ರಂದು ನಟ ದರ್ಶನ್ ಮತ್ತು ಇತರರಿಗೆ ಜಾಮೀನು ನೀಡಿತು. ಜಾಮೀನು ಮಂಜೂರು ಮಾಡುವ ಮೊದಲು, ನಟನನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರಿಸಲಾಗಿತ್ತು.
ಆದರೆ ಇತರ ಕೆಲವು ಜೈಲು ಕೈದಿಗಳೊಂದಿಗೆ ವಿಶ್ರಾಂತಿ ಪಡೆಯುತ್ತಿರುವ ಫೋಟೋಗಳು ವೈರಲ್ ಆದ ನಂತರ, ಅವರನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ವರ್ಗಾಯಿಸಲಾಗಿತ್ತು. ರೇಣುಕಾಸ್ವಾಮಿ ಕೇಸ್ನಲ್ಲಿ ದರ್ಶನ್ ಎರಡನೇ ಆರೋಪಿಯಾಗಿದ್ದರೆ, ಪವಿತ್ರಾ ಗೌಡ ಮೊದಲನೇ ಆರೋಪಿ, ಜಗದೀಶ್ ಆರನೇ ಆರೋಪಿ, ಅನುಕುಮಾರ್ ಏಳನೇ ಆರೋಪಿ, ಆರ್ ನಾಗರಾಜ್ 11ನೇ ಆರೋಪಿ, ಎಂ ಲಕ್ಷ್ಮಣ್ 12ನೇ ಆರೋಪಿ ಹಾಗೂ 14ನೇ ಆರೋಪಿ ಪ್ರದೋಶ್ ಜಾಮೀನು ಅನ್ನು ರದ್ದು ಮಾಡುವಂತೆ ಪೊಲೀಸರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.