ದಾವಣಗೆರೆ: 220ಕೆವಿಎ ಎಸ್.ಆರ್.ಎಸ್ ಕವಿಪ್ರನಿನಿ ಚಿತ್ರದುರ್ಗ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜನವರಿ 28 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕರೆಂಟ್ ಇರುವುದಿಲ್ಲ.
ಚಿತ್ರದುರ್ಗದಿಂದ ವಿದ್ಯುತ್ ಸರಬರಾಜು ಆಗುವ ಜಗಳೂರು ಮತ್ತು ಬಿದರಕೆರೆ ವಿ.ವಿ.ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳ ಎನ್.ಜೆ.ವೈ ಮತ್ತು ಐ.ಪಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ